ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.ಸರ್ಕಾರದ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಇದೇ ವೇಳೆ ಹಲವು ವಸ್ತುಗಳ ಬೆಲೆ ಅಗ್ಗವಾಗಲಿದೆ ಎಂದು ತಿಳಿಸಿದ್ದಾರೆ.ಅಲ್ಲದೆ ಹಲವು ಉತ್ಪನ್ನಗಳ ಬೆಲೆ ಇಳಿಕೆ ಮಾಡುವ ಮೂಲಕ ಮಧ್ಯಮ ವರ್ಗದವರಿಗೆ ಗುಡ್‌ನ್ಯೂಸ್ ಕೊಡಲಾಗಿದೆ.
ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಲಿದೆ ಇಲ್ಲಿದೆ ಮಾಹಿತಿ
ನೇಕಾರರು ನೇಯ್ದ ಬಟ್ಟೆ
ಚರ್ಮದಿಂದ ತಯಾರಿಸಿದ ವಸ್ತುಗಳು
ಜೀವರಕ್ಷಕ ಔಷಧಗಳು
ಕ್ಯಾನ್ಸರ್ ಔಷಧಿಗಳು
ಎಲ್‌ಇಡಿ-ಎಲ್‌ಸಿಡಿ ಟಿವಿ ಬೆಲೆಗಳು ಕಡಿಮೆಯಾಗಲಿದೆ.
ಇವುಗಳ ಮೇಲೆ ವಿಧಿಸಲಾಗಿದ್ದ ಕಸ್ಟಮ್ ಸುಂಕವನ್ನು ಕಡಿತಗೊಳಿಸಲಾಗಿದೆ.
ಲಿಥಿಯಂ ಐಯಾನ್ ಬ್ಯಾಟರಿಗಳು
ಇವಿ ಮತ್ತು ಮೊಬೈಲ್ ಬ್ಯಾಟರಿಗಳ ಬೆಲೆ ಕಡಿಮೆಯಾಗಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


