ಕೇಂದ್ರ ಬಜೆಟ್ ಮಂಡನೆಗೆ ಮುನ್ನವೇ ಜನಸಾಮಾನ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ.ವಾಣಿಜ್ಯ ಎಲ್‌ಪಿಜಿ ಬೆಲೆ ಇಳಿಕೆಯಾಗಿದೆ.ತೈಲ ಮಾರುಕಟ್ಟೆ ಕಂಪನಿಗಳು ಇಂದು(ಫೆಬ್ರವರಿ 1) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿವೆ,ತೈಲ ಕಂಪನಿಗಳು LPG ಸಿಲಿಂಡರ್‌ಗಳ ಬೆಲೆಯಲ್ಲಿ ₹7 ರೂ.ಗಳಷ್ಟು ಇಳಿಕೆ ಮಾಡಿವೆ,19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಮಾತ್ರ ಈ ಕಡಿತ ಮಾಡಲಾಗಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಅಂದರೆ 14 KG LPG ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ,ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಈ ಹಿಂದೆ ಇದ್ದ ದರವೇ ಮತ್ತೆ ಮುಂದುವರಿಯಲಿದೆ( 805.50).19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1797 ರೂ.ಗಳಷ್ಟಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಬೆಲೆ ಕಡಿತದ ನಿರೀಕ್ಷೆಯಲ್ಲಿದ್ದ ಜನರಿಗೆ ತುಸು ನೆಮ್ಮದಿ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ₹1874.50ಕ್ಕೆ ಲಭ್ಯವಾಗಲಿದೆ.ಈ ಪರಿಷ್ಕೃತ ದರಗಳು ಇಂದಿನಿಂದ (ಫೆಬ್ರವರಿ 1, 2025) ಜಾರಿಗೆ ಬರುತ್ತವೆ
19-ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಪರಿಷ್ಕೃತ ಬೆಲೆಗಳು
ದೆಹಲಿ – ₹1,797
ಕೋಲ್ಕತ್ತಾ – ₹1,907 (ಹಿಂದಿನ ₹1,911)
ಮುಂಬೈ – ₹1,749.50
ಚೆನ್ನೈ – ₹1,959.50 (ಹಿಂದಿನ ₹1,966)
ಬೆಂಗಳೂರು – ₹1,874.50
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


