Wednesday, July 8, 2026
spot_img
More
    spot_img
    HomeBreaking NewsUnion Budget 2025: 36 ಜೀವ ರಕ್ಷಕ ಔಷಧಿಗಳ ಸುಂಕ ತೆರಿಗೆ ರದ್ದು

    Union Budget 2025: 36 ಜೀವ ರಕ್ಷಕ ಔಷಧಿಗಳ ಸುಂಕ ತೆರಿಗೆ ರದ್ದು

    ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಮುಂದಿನ ವರ್ಷ ವೈದ್ಯಕೀಯ ಕಾಲೇಜುಗಳಲ್ಲಿ ಹತ್ತು ಸಾವಿರ ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು ಮತ್ತು ಮುಂದಿನ ಐದು ವರ್ಷಗಳಲ್ಲಿ 75,000 ಸೀಟುಗಳನ್ನು ಸೇರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವಾಗ ಘೋಷಿಸಿದರು.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.ಐಐಟಿಗಳು ಅಥವಾ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಸ್‌ಗೆ ಸಂಬಂಧಿಸಿದಂತೆ ಸಿಹಿ ಸುದ್ದಿಯನ್ನು ನೀಡಿದರು. ಅದೇನೆಂದರೆ, ದೇಶದಲ್ಲಿ 23 ಐಐಟಿ(IIT) ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 10 ವರ್ಷಗಳಲ್ಲಿ ಶೇ. 100 ಕ್ಕಿಂತ ಹೆಚ್ಚಾಗಿದೆ ಮತ್ತು 2014ರ ನಂತರ ಸ್ಥಾಪಿಸಲಾದ ಐದು ಐಐಟಿಗಳಿಗೆ 6,500 ಹೆಚ್ಚುವರಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಮೂಲಸೌಕರ್ಯವನ್ನು ರಚಿಸಲಾಗುವುದು ಎಂದು ಘೋಷ್ಟಿಸಿದರು.

    Advertisement

    ಗಂಭೀರ ಕಾಯಿಲೆಗಳ 36 ಔಷಧಿಗಳ ಸುಂಕ ತೆರಿಗೆ ರದ್ದು

    36 ಜೀವರಕ್ಷಕ ಔಷಧಿಗಳ ಮೇಲಿನ ಸುಂಕ ತೆರಿಗೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸೆಂಟರ್ ನಿರ್ಮಿಸಲಾಗುವುದು. ಕ್ಯಾನ್ಸರ್ ಚಿಕಿತ್ಸೆಗೆ ಔಷಧಗಳು ಅಗ್ಗವಾಗಲಿದ್ದು, 6 ಜೀವ ರಕ್ಷಕ ಔಷಧಿಗಳ ಮೇಲಿನ ಕಸ್ಟಮ್ ಸುಂಕವನ್ನು ಶೇಕಡಾ 5ಕ್ಕೆ ಇಳಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಕೇಂದ್ರದ ಈ ಕ್ರಮದಿಂದಾಗಿ ಔಷಧಿಗಳ ಬೆಲೆ ಕಡಿಮೆ ಆಗಲಿದೆ.ಜಿಲ್ಲಾ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 300 ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading