Wednesday, July 8, 2026
spot_img
More
    spot_img
    HomeMahakumbh Mela 2025ಮಹಾಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಚಿತ್ರದುರ್ಗದಿಂದ ತೆರಳಿದ್ದ ನಾಗಸಾಧು ಸಾವು

    ಮಹಾಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಚಿತ್ರದುರ್ಗದಿಂದ ತೆರಳಿದ್ದ ನಾಗಸಾಧು ಸಾವು

    ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಕ್ಕಿ ಕರ್ನಾಟಕ ಮೂಲಕ ನಾಗಸಾಧು ಸಾವನ್ನಪ್ಪಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    Advertisement

    ಚಿತ್ರದುರ್ಗದ ಬಂಜಾರ ಗುರು ಪೀಠದಲ್ಲಿ ಕಳೆದ ಏಳು ವರ್ಷಗಳಿಂದ ನೆಲೆಸಿದ್ದ ನಾಗಸಾಧು ರಾಜನಾಥ ಮಹಾರಾಜ್‌ ಕಾಳ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಳೆದ ಒಂದುವಾರದ ಹಿಂದೆಯಷ್ಟೇ ಕುಂಭಮೇಳಕ್ಕೆ ತೆರಳಿದ್ದ ರಾಜನಾಥ್‌ ಮಹಾರಾಜ್‌ ಬಂಜಾರ ಗುರುಪೀಠದ ಪೀಠಾಧಿಪತಿ ಸರ್ಧಾರ್‌ ಸೇವಾಲಾಲ್‌ ಶ್ರೀಗಳ ಒಡನಾಡಿಯಾಗಿದ್ದರು.

    ಇವರ ಸಾವಿನ ಬಗ್ಗೆ ಉತ್ತರ ಪ್ರದೇಶದ ಪೊಲೀಸರು, ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದು, ರಾಜನಾಥ್‌ ಸಾವಿನ ಖಚಿತ ಪಡಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗದಲ್ಲಿ ಲಂಬಾಣಿ ಗುರುಪೀಠದ ಸರ್ಧಾರ್‌ ಸೇವಾಲಾಲ್‌ ಸ್ವಾಮೀಜಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

    ಚಿತ್ರದುರ್ಗಕ್ಕೆ ರಾಜನಾಥ್‌ ಮಹಾರಾಜರ ಪಾರ್ಥಿವ ಶರೀರವನ್ನು ತಲುಪಿಸುವಂತೆ ಉತ್ತರ ಪ್ರದೇಶ ಸರ್ಕಾರ ಹಾಗೂ ಕರ್ನಾಟಕ ಸರ್ಕಾರಕ್ಕೆ ಸರ್ಧಾರ ಸೇವಾಲಾಲ್‌ ಸ್ವಾಮೀಜಿ ಮನವಿ ಮಾಡಿದ್ದಾರೆ. ಅಲ್ಲದೇ ಕಾಲ್ತುಳಿತದಿಂದ ಸಾವು ನೋವಾಗದಂತೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ.

    ಇನ್ನು ಪ್ರಯಾಗ್‌ ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading