ನವದೆಹಲಿ ;ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ.ಸತತ 8ನೇ ಬಜೆಟ್ ಮಂಡನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರೆಡಿಯಾಗಿದ್ದಾರೆ. ಈ ಬಾರಿಯೂ ನಿರ್ಮಲಾ ಅವರ ಸೀರೆ ಗಮನ ಸೆಳೆದಿದೆ. ಮಧುಬನಿ ಕಲೆಯುಳ್ಳ ಕೆನೆ ಬಣ್ಣದ ಸೀರೆ ಧರಿಸಿ ಸಂಸತ್ ಭವನಕ್ಕೆ ಅವರು ಆಗಮಿಸಿದ್ದಾರೆ. ಈ ಮೂಲಕ ಮಧುಬನಿ ಕಲೆ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತೆ ದುಲಾರಿ ದೇವಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ನಿರ್ಮಲಾ ಇತ್ತೀಚೆಗೆ ದುಲಾರಿ ದೇವಿ ಅವರನ್ನು ಭೇಟಿಯಾಗಿದ್ದರು. ಆಗ ಅವರು ಈ ಸೀರೆ ಗಿಫ್ಟ್ ನೀಡಿದ್ದರು. ಬಜೆಟ್ ದಿನ ಅದನ್ನು ಧರಿಸುವಂತೆ ಮನವಿ ಮಾಡಿದ್ದರು.

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ನ ಮೂಲಕ ಪಡೆಯುವ ಸಾಲದ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಕಿಸಾನ್ ಕ್ರೆಡಿಟ್ ಕಾರ್ಡ್‌ಗಳು (KKC) 7.7 ಕೋಟಿ ರೈತರು, ಮೀನುಗಾರರು ಮತ್ತು ಡೈರಿ ರೈತರಿಗೆ ಅಲ್ಪಾವಧಿಯ ಸಾಲಗಳನ್ನು ಸುಗಮಗೊಳಿಸುವುದನ್ನು ಮುಂದುವರಿಸುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದರು.
ಕೃಷಿ ವಲಯಕ್ಕೆ ಹೊಸ ಯೋಜನೆ ಘೋಷಣೆ;ಪ್ರಧಾನ ಮಂತ್ರಿ ಧನ್ ಧಾನ್ಯ ಯೋಜನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ವಲಯಕ್ಕೆ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ (PMDDKY) ಎಂಬ ನೂತನ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯ ಮೊದಲ ಹಂತವಾಗಿ 100 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುವುದು. ದೇಶದಲ್ಲಿ ಕಡಿಮೆ ಇಳುವರಿ ಇರುವ 100 ಜಿಲ್ಲೆಗಳನ್ನು ಆಯ್ಕೆ ಮಾಡಿ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸೀತಾರಾಮನ್ ಘೋಷಿಸಿದ್ದಾರೆ.ಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


