ಮೈಸೂರು: ಲೋಕಾಯುಕ್ತಕ್ಕೆ ಮುಡಾ ವಿಚಾರವಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ನಾನಾಗಲಿ ಅಥವಾ ನನ್ನ ಮಗನಾಗಲಿ ಯಾವುದೆ ಅಕ್ರಮ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀನಿನ ಭೂ ಮಾಲೀಕರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮುಡಾದಲ್ಲಿ ಅಕ್ರಮ ಮಾಡಿರುವವರ ವಿಚಾರ ಹೊರಗೆ ಬರುತ್ತಿಲ್ಲ. ಆದರೆ ಅಕ್ರಮ ಮಾಡದೇ ಇರುವವರ ಬಗ್ಗೆ ಪ್ರತಿನಿತ್ಯ ಚರ್ಚೆ ಆಗುತ್ತಿದೆ. ಹೀಗಾಗಿ ಮೈಸೂರು ಮಹಾರಾಜರು ಕಟ್ಟಿದ ಮುಡಾದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಮುಡಾ ಹಗರಣದ ಬಗ್ಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಹೀಗಾಗಿ ಸತ್ಯಾಸತ್ಯತೆ ಹೊರ ಬರಬೇಕಿದೆ. ಆ ನಂತರ ಮುಡಾ ಅಭಿವೃದ್ಧಿ ಆಗಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿದ ಅವರು, ಕಳೆದ ವರ್ಷಗಳಲ್ಲಿ ಭೀಕರವಾಗಿ ಕಾಡಿದ ಕೊರೋನಾ ವೈರಸ್‌ನಂತೆ ಮೈಕ್ರೋ ಫೈನಾನ್ಸ್‌ಗಳು ಇದೀಗ ರಾಜ್ಯದಾದ್ಯಂತ ಜನರಿಗೆ ಕಿರುಕುಳ ನೀಡುತ್ತಿವೆ. ಅಲ್ಲದೇ ಈಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಹೀಗಾಗಿ ನಾವು ಸರ್ಕಾರದ ಈ ನಿರ್ಧಾರವನ್ನು ಸ್ವಾಗತ ಮಾಡಲಿದ್ದು, ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


