ಮೈಸೂರು: ಮೈಕ್ರೋ ಫೈನಾನ್ಸ್‌ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮೆ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿತ ಸಾಲ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ಜಾರಿಗೆ ತರುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿದೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು. ಜಾತ್ಯಾತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣ ಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಢ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಸದ್ಯದಲ್ಲೇ ಕಡಿವಾಣ ಹಾಕುತ್ತೇವೆ. ಯಾರೂ ಕೂಡ ಆತ್ಮಹತ್ಯೆಗೆ ಶರಣಾಗಬೇಡಿ. ಸರ್ಕಾರ ನಿಮ್ಮ ಜೊತೆ ಇದೆ. ಯಾರೂ ಕೂಡ ಧೈರ್ಯ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದರು.
ಇನ್ನು ನಮ್ಮ ಗ್ಯಾರಂಟಿ ಯೋಜನೆಗಳು ಪ್ರತಿ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಚಲನೆ ನೀಡಿವೆ. ಜನರ ಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿದ್ದರಿಂದಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಸದೃಢವಾಗಿದೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


