Monday, July 6, 2026
spot_img
More
    spot_img
    HomeLatest newsಬಜೆಟ್‌ನಿಂದ ಯಾವುದೇ ಲಾಭ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

    ಬಜೆಟ್‌ನಿಂದ ಯಾವುದೇ ಲಾಭ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

    ಬೆಂಗಳೂರು;ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ 8ನೇ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ, ಇದರಿಂದ ಯಾರಿಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.2025ರ ಕೇಂದ್ರ ಬಜೆಟ್‌ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಮೋದಿ ಸರ್ಕಾರದಲ್ಲಿ ಗಾಳಿ ಮತ್ತು ಬೆಳಕು ಈ ಎರಡು ಬಿಟ್ಟು, ಇನ್ನೆಲ್ಲಾ ಬೆಲೆ ಏರಿಕೆ ಆಗಿದೆ ಎಂದು ಸಚಿವರು ವ್ಯಂಗ್ಯವಾಡಿದ್ದಾರೆ. ಕೇಂದ್ರ ಬಜೆಟ್‌ನಿಂದ ನಮಗೆ ಯಾವುದೇ ಲಾಭ ಇಲ್ಲ. 1947ರಿಂದ ಇಲ್ಲಿಯತನಕ ₹53 ಲಕ್ಷ ಕೋಟಿ ಸಾಲ ಇತ್ತು. ಈಗ 11 ವರ್ಷಗಳಲ್ಲಿ ₹150 ಲಕ್ಷ ಕೋಟಿ ಹೆಚ್ಚುವರಿ ಸಾಲ ಆಗಿದೆ. ಈ ಮೂಲಕ ದೇಶದ ಸಾಲ ಈಗ ₹200 ಲಕ್ಷ ಕೋಟಿ ಆಗಿದೆ ಎಂದು ಕಿಡಿಕಾರಿದ್ದಾರೆ.

    Advertisement

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading