ಚಿತ್ರದುರ್ಗ: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ದಿನೇ ದಿನೇ ಜೋರಾಗುತ್ತಿರುವ ಬೆನ್ನಲ್ಲೇ ಮಾಜಿ ಸಚಿವ ಶ್ರೀರಾಮುಲು ಇದೀಗ ತಮ್ಮ ಕನಸನ್ನು ಬಹಿರಂಗಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಹೈಕಮಾಂಡ್ ಭೇಟಿ ವಿಚಾರ, ರಾಜ್ಯಾಧ್ಯಕ್ಷ ಸ್ಥಾನ, ಬಿಜೆಪಿ ಬಿಟ್ಟು ಹೋಗುತ್ತಾರಾ ಅಥವಾ ಇಲ್ಲವಾ ಎಂಬ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ದೆಹಲಿ ಚುನಾವಣೆ ಇರುವ ಕಾರಣ ನಾನು ಹೈಕಮಾಂಡ್ ಭೇಟಿ ತಡವಾಗಿದೆ. ಪಾರ್ಲಿಮೆಂಟ್ ಕೂಡ ಆರಂಭವಾಗಿರುವ ಕಾರಣ ತಡವಾಗಿದೆ. ಸಮಯ ನೋಡಿಕೊಂಡು ಹೋಗಿ ಎಲ್ಲಾ ವಿಚಾರಗಳನ್ನು ತಿಳಿಸುತ್ತೇನೆ. ಬಿಜೆಪಿಯಲ್ಲಿ ನಾನು ತುಂಬಾ ವರ್ಷ ಸೀನಿಯರ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ರಾಜಕಾರಣದಲ್ಲಿ ನಾನು ಬಿಜೆಪಿಯಲ್ಲಿ ಇದ್ದೇನೆ. ಒಬ್ಬರಿಗೆ ನೋವಾದಾಗ ಬೇರೆ ಪಕ್ಷದವರು ಕರೆಯೋದು ಸಹಜ. ಎಲ್ಲಾ ಸ್ನೇಹಿತರು ಕೂಡ ಆಹ್ವಾನಿಸಿದ್ದಾರೆ. ಅದು ಅವರ ದೊಡ್ಡ ಗುಣ. ಆದರೆ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷ ಗಟ್ಟಿಯಾಗಬೇಕಿದೆ. ಜನರ ಜೊತೆ ಇದ್ದು ರಾಜಕಾರಣ ಮಾಡುವುದು ಮುಖ್ಯವಾಗಿದೆ. ಇವತ್ತು ನನಗೆ ಕೆಲಸ ಇಲ್ಲ. ನನಗೆ ಯಾವುದೇ ಸ್ಥಾನ ಕೊಟ್ಟರೂ ಕೆಲಸ ಮಾಡುತ್ತೇನೆ. ರಾಜ್ಯಾಧ್ಯಕ್ಷ ಹುದ್ದೆಗೆ ಯತ್ನಾಳ್, ರಾಮುಲು, ವಿಜಯೇಂದ್ರಗೆ ಸಿಗಲಿ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಎಲ್ಲಾ ಶಕ್ತಿ ಕುರಿತು ಚರ್ಚೆ ನಡೆಯುತ್ತಿದೆ. ನಾನು ಕೂಡ ಹೈಕಮಾಂಡ್ ಮುಂದೆ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


