Thursday, March 19, 2026
spot_img
More
    spot_img
    HomeLatest newsUnion Budget 2025: ಕೇಂದ್ರ ಸರ್ಕಾರಕ್ಕೆ ಶಿಕ್ಷಣದ ಪರಿಜ್ಞಾನವಿಲ್ಲ; ಬಜೆಟ್ ವಿರುದ್ಧ ಮಧು ಬಂಗಾರಪ್ಪ ಕಿಡಿ

    Union Budget 2025: ಕೇಂದ್ರ ಸರ್ಕಾರಕ್ಕೆ ಶಿಕ್ಷಣದ ಪರಿಜ್ಞಾನವಿಲ್ಲ; ಬಜೆಟ್ ವಿರುದ್ಧ ಮಧು ಬಂಗಾರಪ್ಪ ಕಿಡಿ

    ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಶಿಕ್ಷಣದ ಪರಿಜ್ಞಾನವಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಟೀಕಿಸಿದ್ದಾರೆ.


    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರಾಜ್ಯಗಳಿಗಿಂತ ಹೆಚ್ಚು ತೆರಿಗೆ ಸಂಗ್ರಹವಾಗುವ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.


    ಎಸ್‍ಎಸ್‍ಎ ಮೂಲಕ ಪ್ರತಿ ಮಕ್ಕಳಿಗೆ 6 ರಿಂದ 7 ಸಾವಿರ ರೂ. ಖರ್ಚಾಗಲಿದೆ. ಆದರೆ 2 ರಿಂದ 3 ಸಾವಿರ ರೂ.ನಷ್ಟು ಮಾತ್ರ ಖರ್ಚು ಮಾಡಲಾಗುತ್ತಿದೆ. ಉಳಿದ ಹಣಕ್ಕೆ ಏನು ಮಾಡಬೇಕು. ಎಲ್ಲರೂ ಸೇರಿ ಆಂದೋಲನ ಮಾಡಬೇಕಷ್ಟೆ ಎಂದರು.


    ಜಿಎಸ್‍ಟಿ ವಿಚಾರದಲ್ಲೂ ತಾರತಮ್ಯ ಮಾಡಲಾಗುತ್ತದೆ. ಎಲ್ಲಾ ಹಣ ಉತ್ತರ ಪ್ರದೇಶಕ್ಕೆ ಹೋಗುತ್ತಿದೆ. ನಮ್ಮ ಪಾಲನ್ನು ನಮಗೆ ಕೊಡಲಿ ಎಂಬುದಷ್ಟೇ ನಮ ಬೇಡಿಕೆ. ಹೆಚ್ಚುಕಡಿಮೆ ಆಗಲಿ. ಆದರೆ ಹೆಚ್ಚು ತಾರತಮ್ಯವಾಗಬಾರದು ಎಂದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿಯವರಿಂದಲೂ ನಿರೀಕ್ಷೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


    ನಮ ಸರ್ಕಾರದ ಗ್ಯಾರಂಟಿಯನ್ನು ಬಿಜೆಪಿಯವರು ಖಂಡಿಸಿದರು. ನಾವು ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಗೃಹಲಕ್ಷ್ಮಿ ಯೋಜನೆಯಡಿ ಹಣ ನೀಡುತ್ತಿದ್ದೇವೆ. ಹೊಸ ಬಸ್‍ಗಳನ್ನು ಕೂಡ ಖರೀದಿಸಲಾಗುತ್ತಿದೆ ಎಂದು ಸಮರ್ಥನೆ ಮಾಡಿಕೊಂಡರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಗರ್ಭಧಾರಣೆ ಘೋಷಿಸಿದ ತಿಂಗಳಲ್ಲೇ ಯೂಟ್ಯೂಬರ್ ಪತ್ನಿ ಹತ್ಯೆ—ಪತಿಯ ಭೀಕರ ಕೃತ್ಯ!

    ತೆಲಂಗಾಣದಲ್ಲಿ ನಡೆದ ಈ ದಾರುಣ ಘಟನೆ ದೇಶದಾದ್ಯಂತ ಆತಂಕ ಮೂಡಿಸಿದೆ. “ಯೂಟ್ಯೂಬರ್ ಪತ್ನಿ ಹತ್ಯೆ” ಪ್ರಕರಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತನ್ನ ಗರ್ಭಧಾರಣೆಯನ್ನು ಸ್ವತಃ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ...

    ಐಪಿಎಲ್ 2026: ಇಶಾನ್ ಕಿಶನ್ ಕೈಗೆ SRH ನಾಯಕತ್ವ—ಅಭಿಷೇಕ್ ಶರ್ಮಾಗೆ ಹೊಸ ಜವಾಬ್ದಾರಿ!

    ಐಪಿಎಲ್ 2026 ಕುರಿತು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ! “ಐಪಿಎಲ್ 2026 ಇಶಾನ್ ಕಿಶನ್ SRH ನಾಯಕ” ಎಂಬ ಸುದ್ದಿ ಈಗ ಕ್ರಿಕೆಟ್ ವಲಯದಲ್ಲಿ ಸದ್ದು ಮಾಡುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಿದ್ದು,...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading