ಬೆಂಗಳೂರು: ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕದ ಯಾವ ಬೇಡಿಕೆಯೂ ಈಡೇರಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನ್ಯಾಯ ಕೊಡುವ ಕೆಲಸ ಕೇಂದ್ರ ಬಜೆಟ್‍ನಲ್ಲಿ ಆಗಿಲ್ಲ. ಹೀಗಾಗಿ ಕರ್ನಾಟಕದ ಪಾಲಿಗೆ ಕರಾಳದಿನವಾಗಿದೆ ಎಂದರು.
ಕರ್ನಾಟಕದ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ. ಬಿಹಾರ ರಾಜ್ಯಕ್ಕೆ ಐದಾರು ಯೋಜನೆ ಕೊಟ್ಟಿದ್ದಾರೆ. ಹಾಗಾದರೆ ಕರ್ನಾಟಕಕ್ಕೆ ಚೊಂಬು ಸಿಕ್ಕಿದೆ. ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಣಕಾಸು ಆಯೋಗ 11,495 ಕೋಟಿ ರೂ. ಕೊಡಲು ಹೇಳಿತ್ತು. ಬರಲೇಬೇಕಾದ ಈ ಅನುದಾನದ ಬಗ್ಗೆ ಚಕಾರ ಎತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡು ಭಾಗಕ್ಕೂ ಏನೂ ಕೊಟ್ಟಿಲ್ಲ. ಬೆಂಗಳೂರು ಸಾಕಷ್ಟು ಉದ್ಯೋಗ ನೀಡುತ್ತಿದೆ. ರಫ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯವನ್ನು ತಂದುಕೊಡುತ್ತಿದೆ. ಆದರೂ ಕೇಂದ್ರ ಬಜೆಟ್‍ನಲ್ಲಿ ಏನೂ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರಕ್ಕೆ ಉತ್ತರಪ್ರದೇಶ, ಬಿಹಾರ ರಾಜ್ಯಗಳು ಮಾತ್ರ ಕಾಣುತ್ತಿವೆ. ಕರ್ನಾಟಕ ಕಾಣುತ್ತಿಲ್ಲ. ತೆರಿಗೆ ಕಟ್ಟಿದ ಕನ್ನಡಿಗರು ಕಾಣುತ್ತಿಲ್ಲ. ನಮ ರಾಜ್ಯ ಕೇವಲ ದುಡಿಯುವ ವರ್ಗದ ರೀತಿ ಕಾಣುತ್ತಿದೆ ಎಂದು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


