ಬೆಂಗಳೂರು: 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಆಯೋಗ ರಾಜ್ಯಕ್ಕೆ ಶಿಫಾರಸು ಮಾಡಿರುವ ವಿಶೇಷ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಫಲಾನುಭವಿಗಳಾಗಿರುವ ಎಲ್ಲರಿಗೂ ಆರೋಗ್ಯ ಯೋಜನೆಯನ್ನು ವಿಸ್ತರಿಸಬೇಕು. ಈ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಶನಿವಾರ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು.
ಕರ್ನಾಟಕವು ಸೇರಿದಂತೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳ ಆದ್ಯತೆಗಳನ್ನು ಗುರುತಿಸಿ ಸಂಪನ್ಮೂಲ ಹಂಚಿಕೆಯ ವಿಚಾರದಲ್ಲಿ ಅವುಗಳಿಗೆ ಶಕ್ತಿ ತುಂಬಬೇಕು ಎಂದು ಆಗ್ರಹಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


