ಮೈಸೂರು: ಇಲ್ಲಿನ ಕೆಎಸ್ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಪಂಜಾಬ್ ದ ಶೇರ್ ಹಾಗೂ ಬೆಂಗಾಲ್ ಟೈಗರ್ಸ್ ನಡುವೆ ನಡೆದಿದ್ದು ಹಾಲಿ ಚಾಂಪಿಯನ್ಸ್ ಬೆಂಗಾಲ್ ಟೈಗರ್ಸ್ ವಿರುದ್ಧ 8 ವಿಕೆಟ್ಗಳ ಜಯ ದಾಖಲಿಸಿದ ಪಂಜಾಬ್ ದೆ ಶೇರ್ ಫೈನಲ್ ತಲುಪಿದೆ.
ಇನ್ನು ಎರಡನೇ ಸೆಮಿಫೈನಲ್ ಪಂದ್ಯ ಇದೇ ಕ್ರೀಡಾಂಗಣದಲ್ಲಿ ಸಂಜೆ 6.30ಕ್ಕೆ ಆರಂಭವಾಗಿದ್ದು, ಈ ಪಂದ್ಯದಲ್ಲಿ ಬದ್ಧ ವೈರಿಗಳಾದ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಚೆನ್ನೈ ರೈನೋಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಚೆನ್ನೈ ರೈನೋಸ್ ಬೌಲಿಂಗ್ ಆರಿಸಿಕೊಂಡಿದ್ದು ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಅದರಂತೆ ಕರ್ನಾಟಕ ಬುಲ್ಡೋಜರ್ಸ್ ಹತ್ತು ಓವರ್ಗಳ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದೆ. ತಂಡದ ಪರ ಆರಂಭಿಕರಾಗಿ ಡಾರ್ಲಿಂಗ್ ಕೃಷ್ಣ ಹಾಗೂ ರಾಜೀವ್ ಹನು ಕಣಕ್ಕಿಳಿದಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


