Tuesday, November 3, 2026
spot_img
More
    spot_img
    HomeTop StoryChampions Trophy 2025: ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ ಪಂದ್ಯದಲ್ಲಿ ಹೀಗಾದ್ರೆ ಮಾತ್ರ ಅಪ್ಘಾನಿಸ್ತಾನ ಸೆಮಿಫೈನಲ್‌ಗೆ;...

    Champions Trophy 2025: ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ ಪಂದ್ಯದಲ್ಲಿ ಹೀಗಾದ್ರೆ ಮಾತ್ರ ಅಪ್ಘಾನಿಸ್ತಾನ ಸೆಮಿಫೈನಲ್‌ಗೆ; ಕಷ್ಟಕಷ್ಟ!

    ಲಾಹೋರ್: ಇಲ್ಲಿನ ಗಡ್ಡಾಫಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ (ಫೆಬ್ರವರಿ 28) ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಹತ್ತನೇ ಪಂದ್ಯ ಮಳೆಯಿಂದಾಗಿ ರದ್ದಾಯಿತು.

    ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಸೆದಿಕ್‌ಉಲ್ಲಾ ಅಟಲ್ ಹಾಗೂ ಅಜ್ಮತುಲ್ಲಾ ಓಮರ್ಜೈ ಜವಾಬ್ದಾರಿಯುತ ಆಟದ ನೆರವಿನಿಂದ 50 ಓವರ್‌ಗಳಲ್ಲಿ 273 ರನ್ ಕಲೆಹಾಕಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾಗೆ ಗೆಲ್ಲಲು 274 ರನ್‌ಗಳ ಗುರಿಯನ್ನು ನೀಡಿತು.

    ಈ ಗುರಿಯನ್ನು ಬೆನ್ನಟ್ಟಲು ಆರಂಭಿಸಿ ಶುರುವಿನಿಂದಲೇ ಅಬ್ಬರದ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 12.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 109 ರನ್ ದಾಖಲಿಸಿತ್ತು. ಈ ಸಮಯಕ್ಕೆ ಶುರುವಾದ ಮಳೆ ಎಲ್ಲಿಯೂ ಬಿಡುವು ಕೊಡಲಿಲ್ಲ. ಹೀಗಾಗಿ ಪಂದ್ಯ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ.

    ಈ ಮೂಲಕ ಎರಡೂ ತಂಡಗಳಿಗೂ ತಲಾ ಒಂದೊಂದು ಅಂಕ ಲಭಿಸಿದ್ದು, ಒಟ್ಟಾರೆ 4 ಅಂಕ ಪಡೆದ ಆಸ್ಟ್ರೇಲಿಯಾ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಇತ್ತ ಅಫ್ಘಾನಿಸ್ತಾನ ಒಟ್ಟಾರೆ 3 ಅಂಕ ಗಳಿಸಿದ್ದು, ಬಹುತೇಕ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿದೆ. ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಲಾ 3 ಅಂಕಗಳನ್ನು ಹೊಂದಿವೆ. ಇನ್ನು ನಾಳೆ ದಕ್ಷಿಣ ಆಫ್ರಿಕಾ ಇಂಗ್ಲೆಂಡ್ ವಿರುದ್ಧ ಸೆಣಸಾಡಲಿದ್ದು, ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋತರೂ ಸೆಮಿಫೈನಲ್ ಪ್ರವೇಶಿಸುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ಇಂಗ್ಲೆಂಡ್ ಭಾರೀ ಅಂತರದಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿದರೆ ಮಾತ್ರ ಅಫ್ಘಾನಿಸ್ತಾನದ ನೆಟ್ ರನ್ ರೇಟ್ ದಕ್ಷಿಣ ಆಫ್ರಿಕಾ ನೆಟ್ ರನ್‌ ರೇಟ್‌ಗಿಂತ ಹೆಚ್ಚಾಗಲಿದೆ. ಹಾಗಿದ್ದರೆ ಇಂಗ್ಲೆಂಡ್ ಎಷ್ಟು ಅಂತರದಿಂದ ಗೆದ್ದರೆ ಅಫ್ಘಾನಿಸ್ತಾನ ಸೆಮಿಫೈನಲ್ ಪ್ರವೇಶಿಸುವಷ್ಟು ನೆಟ್ ರನ್ ರೇಟ್ ಪಡೆದುಕೊಳ್ಳಲಿದೆ ಎಂಬ ಮಾಹಿತಿ ಕೆಳಕಂಡಂತಿದೆ.

    ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿದರೆ ದಕ್ಷಿಣ ಆಫ್ರಿಕಾ ತಂಡವನ್ನು ಕನಿಷ್ಟ 207 ರನ್‌ಗಳ ಅಂತರದಿಂದ ಸೋಲಿಸಬೇಕು. ಒಂದುವೇಳೆ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡಿದರೆ ದಕ್ಷಿಣ ಆಫ್ರಿಕಾ ನೀಡುವ ಗುರಿಯನ್ನು 11.1 ಓವರ್‌ಗಳಲ್ಲಿ ಬಾರಿಸಬೇಕು. ಹೀಗಾಗಿ ಅಫ್ಘಾನಿಸ್ತಾನ ಸೆಮಿಫೈನಲ್ ಕನಸು ಭಗ್ನವಾದಂತೆ ಸರಿ..


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search