ಲಾಹೋರ್: ಇಲ್ಲಿನ ಗಡ್ಡಾಫಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ (ಫೆಬ್ರವರಿ 28) ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಹತ್ತನೇ ಪಂದ್ಯ ಮಳೆ ಕಾರಣದಿಂದಾಗಿ ಫಲಿತಾಂಶವಿಲ್ಲದೇ ಅಂತ್ಯಗೊಂಡಿತು.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಆರಂಭಿಕ ಆಘಾತ ಅನುಭವಿಸಿದರೂ ಸಹ ಸೆದಿಕ್ಉಲ್ಲಾ ಅಟಲ್ ಹಾಗೂ ಅಜ್ಮತುಲ್ಲಾ ಓಮರ್ಜೈ ಜವಾಬ್ದಾರಿಯುತ ಆಟದ ನೆರವಿನಿಂದ 50 ಓವರ್ಗಳಲ್ಲಿ 273 ರನ್ ಕಲೆಹಾಕಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾಗೆ ಗೆಲ್ಲಲು 274 ರನ್ಗಳ ಗುರಿಯನ್ನು ನೀಡಿತು.
ಈ ಗುರಿಯನ್ನು ಬೆನ್ನಟ್ಟಲು ಆರಂಭಿಸಿ ಶುರುವಿನಿಂದಲೇ ಅಬ್ಬರದ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 12.5 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 109 ರನ್ ದಾಖಲಿಸಿತ್ತು. ಈ ಸಮಯಕ್ಕೆ ಶುರುವಾದ ಮಳೆ ಎಲ್ಲಿಯೂ ಬಿಡುವು ಕೊಡಲಿಲ್ಲ. ಹೀಗಾಗಿ ಪಂದ್ಯ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ.
ಈ ಮೂಲಕ ಎರಡೂ ತಂಡಗಳಿಗೂ ತಲಾ ಒಂದೊಂದು ಅಂಕ ಲಭಿಸಿದ್ದು, ಒಟ್ಟಾರೆ 4 ಅಂಕ ಪಡೆದ ಆಸ್ಟ್ರೇಲಿಯಾ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಹೀಗೆ ಆಸ್ಟ್ರೇಲಿಯಾ ಸೆಮಿಫೈನಲ್ಗೆ ಬರುತ್ತಿದ್ದಂತೆ ಆಸ್ಟ್ರೇಲಿಯಾ ಕ್ರಿಕೆಟ್ ಅಭಿಮಾನಿಗಳ ಅಧಿಕೃತ ಎಕ್ಸ್ ಖಾತೆಯಲ್ಲಿ ‘ಹಲೋ ಇಂಡಿಯಾ ಕಪ್ಗಾಗಿ ನಾವು ಬರುತ್ತಿದ್ದೇವೆ’ ಎಂದು ಬರೆದುಕೊಂಡಿದೆ. ಈ ಮೂಲಕ ಭಾರತ ತಂಡವನ್ನು ಕಾಂಗರೂಗಳು ಕೆಣಕಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


