Tuesday, November 3, 2026
spot_img
More
    spot_img
    HomeChampions Trophy 2025Champions Trophy 2025: ಇಂಗ್ಲೆಂಡ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ಸೆಮೀಸ್ ಪ್ರವೇಶಿಸಿದ ಸೌತ್ ಆಫ್ರಿಕಾ;...

    Champions Trophy 2025: ಇಂಗ್ಲೆಂಡ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ಸೆಮೀಸ್ ಪ್ರವೇಶಿಸಿದ ಸೌತ್ ಆಫ್ರಿಕಾ; ಅಫ್ಘಾನ್ ಓಟ್!

    ಕರಾಚಿ: ಇಲ್ಲಿನ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ 11ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ.

    ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆರಿಸಿಕೊಂಡು 38.2 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 179 ರನ್ ಗಳಿಸಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 180 ರನ್‌ಗಳ ಗುರಿಯನ್ನು ನೀಡಿತ್ತು.

    ಈ ಗುರಿಯನ್ನು ಬೆನ್ನಟ್ಟುವತ್ತ ಹೆಜ್ಜೆ ಇಟ್ಟಿದ್ದು, ಪಂದ್ಯದ ಫಲಿತಾಂಶ ಬರುವ ಮುನ್ನವೇ ದಕ್ಷಿಣ ಆಫ್ರಿಕಾ ಸೆಮಿಫೈನಲ್ ಪ್ರವೇಶಿಸಿದೆ. ಹೌದು, ಈ ಪಂದ್ಯದ ಆರಂಭಕ್ಕೂ ಮುನ್ನ ಬಿ ಗುಂಪಿನ ಅಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ತಲಾ 3 ಅಂಕ ಪಡೆದಿದ್ದವು.

    ಹೀಗಾಗಿ ಇಂಗ್ಲೆಂಡ್ ದೊಡ್ಡ ಅಂತರದಲ್ಲಿ ಗೆದ್ದರೆ ಅಫ್ಘಾನಿಸ್ತಾನಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶವಿತ್ತು. ಅದೂ ಸಹ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿದರೆ ದಕ್ಷಿಣ ಆಫ್ರಿಕಾವನ್ನು 207 ರನ್‌ಗಳ ಅಂತರದಿಂದ ಸೋಲಿಸಬೇಕಿತ್ತು. ಆದರೆ ಇಂಗ್ಲೆಂಡ್ ಕೇವಲ 179 ರನ್‌ಗೆ ಆಲ್‌ಔಟ್ ಆಗಿದ್ದು, ಪಂದ್ಯ ನಡೆಯುತ್ತಿರುವಾಗಲೇ ಆಫ್ರಿಕಾ ಸೆಮಿಫೈನಲ್ ತಲುಪಿದೆ. ಅಫ್ಘಾನಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search