Tuesday, September 1, 2026
spot_img
More
    spot_img
    HomeLatest newsʼಅವನ್ಯಾರು ನಾನು ಸಿಎಂ ಆಗ್ತೀನಿ ಅನ್ನೋಕೆ?ʼ ಡಿಕೆ ಮುಂದಿನ ಸಿಎಂ ಎಂದ ಕಾಂಗ್ರೆಸ್‌ ಶಾಸಕನಿಗೆ‌ ಡಿಕೆಶಿ...

    ʼಅವನ್ಯಾರು ನಾನು ಸಿಎಂ ಆಗ್ತೀನಿ ಅನ್ನೋಕೆ?ʼ ಡಿಕೆ ಮುಂದಿನ ಸಿಎಂ ಎಂದ ಕಾಂಗ್ರೆಸ್‌ ಶಾಸಕನಿಗೆ‌ ಡಿಕೆಶಿ ವಾರ್ನಿಂಗ್!

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಚರ್ಚೆಗಳು ಕಳೆದೆರಡು ವಾರಗಳಿಂದ ಸತತವಾಗಿ ನಡೆಯುತ್ತಲೇ ಇವೆ. ಅದರಲ್ಲಿಯೂ ಕಾಂಗ್ರೆಸ್‌ ಪಾಳಯದಲ್ಲಿ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿವೆ. ಒಂದೆಡೆ ಮುಖ್ಯಮಂತ್ರಿಗಳ ಬದಲಾವಣೆಯಾಗಲಿದೆ ಉಳಿದ ಎರಡೂವರೆ ವರ್ಷಕ್ಕೆ ಡಿಕೆ ಶಿವಕುಮಾರ್‌ ಸಿಎಂ ಆಗಲಿದ್ದಾರೆ ಎಂದು ಕೆಲವರು ಹೇಳುತ್ತಿದ್ದರೆ, ಇನ್ನೂ ಕೆಲವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿದೆ ಎನ್ನುತ್ತಿದ್ದಾರೆ.

    Advertisement

    ಇನ್ನು ಕೆಲ ಶಾಸಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದು, ಭ್ರಷ್ಟಾಚಾರದಂತಹ ಗಂಭೀರ ಆರೋಪ ಹೊರಿಸಿದ್ದಾರೆ. ಈ ಎಲ್ಲ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಿ ರಾಜ್ಯದಲ್ಲಿ ಪಕ್ಷವನ್ನು ಸರಿ ಹಾದಿಗೆ ಸಲುವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದಾರೆ.

    ಇಂತಹ ಸಮಯದಲ್ಲಿಯೇ ಕಾಂಗ್ರೆಸ್‌ನ ರಾಮನಗರ ಶಾಸಕ ಇಕ್ಬಾಲ್‌ ಡಿಕೆ ಶಿವಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ, ನಾನು ಮಾತ್ರವಲ್ಲ ಒಟ್ಟು 100 ಮಂದಿ ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಹೇಳಿಕೆ ನೀಡಿ ಬಾಂಬ್‌ ಸಿಡಿಸಿದ್ದರು.

    ಇಕ್ಬಾಲ್‌ ನೀಡಿದ ಈ ಹೇಳಿಕೆಗೆ ಸ್ವತಃ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿ ಕಿಡಿಕಾರಿದ್ದಾರೆ. ಮಾಧ್ಯಮದವರು ಇಕ್ಬಾಲ್‌ ಹೇಳಿಕೆ ಕುರಿತು ಪ್ರಶ್ನಿಸುತ್ತಿದ್ದಂತೆ ಕಿಡಿಕಾರಿದ ಡಿಕೆ ಶಿವಕುಮಾರ್‌ ಅವನ್ಯಾರು ನಾನು ಸಿಎಂ ಆಗ್ತೀನಿ ಅನ್ನೋಕೆ, ನೋಟಿಸ್‌ ಕಳುಹಿಸುತ್ತೇನೆ, ನನಗೆ ಯಾರು ಸಿಎಂ ಆಗ್ತೀನಿ ಎಂದು ಹೇಳುವ ಅವಶ್ಯಕತ ಇಲ್ಲ, ನಾಳೆನೋ ನಾಡಿದ್ದೋ ಅವನಿಗೆ ನೋಟಿಸ್‌ ಕಳುಹಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

    ನಾನೊಬ್ಬನೇ ಅಲ್ಲ 100 ಶಾಸಕರು ಸಿಎಂ ಬದಲಾವಣೆ ಬೇಕೆಂದಿದ್ದಾರೆ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್್

    ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading