Monday, November 2, 2026
spot_img
More
    spot_img
    HomeLatest newsನಾನೊಬ್ಬನೇ ಅಲ್ಲ 100 ಶಾಸಕರು ಸಿಎಂ ಬದಲಾವಣೆ ಬೇಕೆಂದಿದ್ದಾರೆ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್!

    ನಾನೊಬ್ಬನೇ ಅಲ್ಲ 100 ಶಾಸಕರು ಸಿಎಂ ಬದಲಾವಣೆ ಬೇಕೆಂದಿದ್ದಾರೆ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್!

    ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಮತ್ತು ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಒನ್ ಟು ಒನ್ ಸಭೆ ಮುಂದುವರೆಸಿರುವಂತೆಯೇ ಡಿಕೆ ಶಿವಕುಮಾರ್ ಪರವಾಗಿರುವ 100 ಶಾಸಕರು, ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಹಾಲಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಳಿದ ಅವಧಿಗೆ ಡಿಕೆ ಶಿವಕುಮಾರ್‌ಗೆ ಅವಕಾಶ ನೀಡಬೇಕು. ಇದು ನನ್ನೊಬ್ಬನ ಇಚ್ಚೆ ಅಲ್ಲ, ಸುಮಾರು 100 ಶಾಸಕರು ಸಿಎಂ ಬದಲಾವಣೆ ಪರವಾಗಿದ್ದು, ಈ ಕ್ಷಣಕ್ಕಾಗಿ ಅನೇಕ ಶಾಸಕರು ಕಾಯುತ್ತಿದ್ದಾರೆ ಎಂದು ಅವರು ತಿಳಿಸದ್ದಾರೆ.


    ಅವರು ಉತ್ತಮ ಆಡಳಿತ ಬಯಸಿದ್ದು, ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗಬೇಕು ಎಂಬುದು ಅವರ ಆಪೇಕ್ಷೆಯಾಗಿದೆ. ಹಾಗಾಗೀ ಅವರ ಪರವಾಗಿ ನಿಲ್ಲಲು ಸಿದ್ಧರಾಗಿದ್ದಾರೆ. ಈಗ ಮುಖ್ಯಮಂತ್ರಿ ಬದಲಾವಣೆಯಾಗದಿದ್ರೆ 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


    ಸುರ್ಜೇವಾಲ ಜೊತೆಗಿನ ಇಂದಿನ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ. ಈಗ ಮುಖ್ಯಮಂತ್ರಿ ಬದಲಾವಣೆಯಾಗದಿದ್ರೆ 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಪಕ್ಷದ ಹಿತದೃಷ್ಟಿಯಿಂದ ಇದು ಈಗ ಅಗತ್ಯವಾಗಿದೆ ಎಂದರು.


    ಸಿಎಂ ಸ್ಥಾನದ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹುಸೇನ್, ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದೆ. ನಾವು ಯಾವಾಗಲೂ ಹೈಕಮಾಂಡ್ ಗೌರವಿಸುತ್ತೇವೆ. ಆದರೆ, ನಾವು ವಾಸ್ತವಾಂಶವನ್ನು ಹೇಳಬೇಕಾಗುತ್ತದೆ ಎಂದು ಹೇಳಿದರು.

    ನನಗೆ ಯಾವ ಭಯವೂ ಇಲ್ಲ ಸುರ್ಜೇವಾಲ ಬಳಿ ಎಲ್ಲವನ್ನೂ ಹೇಳುತ್ತೇನೆ: ಕಾಂಗ್ರೆಸ್‌ ಶಾಸಕ ರಾಜು ಕಾಗೆ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search