ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಸಮಾಧಾನ ಹಾಗೂ ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷ ಸ್ಥಾನಗಳ ಬದಲಾವಣೆ ಚರ್ಚೆಗಳು ನಡೆಯುತ್ತಿರುವಾಗಲೇ ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಇನ್ನು ಮೂರು ತಿಂಗಳಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಅಲ್ಲದೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಕ್ಷದ ಶಾಸಕರಾದ ಬಿಆರ್ ಪಾಟೀಲ್ ಹಾಗೂ ರಾಜು ಕಾಗೆ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದು, ಈ ಆರೋಪ ದೊಡ್ಡ ಮಟ್ಟದಲ್ಲಿ ವಿವಾದ ಎಬ್ಬಿಸಿದ ಕಾರಣಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂತಹ ಸಮಯದಲ್ಲಿ ಇಕ್ಬಾಲ್ ಹುಸೇನ್ ಈ ರೀತಿ ಹೇಳಿಕೆ ನೀಡಿದ್ದು ಪಕ್ಷಕ್ಕೆ ಮತ್ತಷ್ಟು ಮುಜುಗರವನ್ನು ತರಿಸಿದೆ.
ಹೀಗಾಗಿ ಇದೀಗ ಸ್ವತಃ ಡಿಕೆ ಶಿವಕುಮಾರ್ ಅವರೇ ಕ್ರಮಕ್ಕೆ ಮುಂದಾಗಿದ್ದು, ಶಾಸಕ ಇಕ್ಬಾಲ್ ಹುಸೇನ್ಗೆ ನೋಟಿಸ್ ನೀಡಿದ್ದಾರೆ. ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ, ನಿಮ್ಮ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ವಾರದೊಳಗೆ ಸಮಜಾಯಿಷಿ ನೀಡಿ ಎಂದು ಪತ್ರದಲ್ಲಿ ಆದೇಶಿಸಲಾಗಿದೆ.
ಇನ್ನು ಡಿಕೆ ಶಿವಕುಮಾರ್ ಇಂದು ( ಜುಲೈ 1 ) ಮಧ್ಯಾಹ್ನವೇ ಇಕ್ಬಾಲ್ ಹುಸೇನ್ ಹೇಳಿಕೆ ಕುರಿತು ಆಕ್ರೋಶ ಹೊರಹಾಕಿ ಅವನ್ಯಾರು ನನ್ನ ಸಿಎಂ ಆಗ್ತೀನಿ ಅನ್ನೋಕೆ, ಯಾರೂ ನನ್ನನ್ನು ಸಿಎಂ ಆಗ್ತೀನಿ ಅನ್ನೋದು ಬೇಡ, ಇಕ್ಬಾಲ್ಗೆನ ನೋಟಿಸ್ ಕಳುಹಿಸುತ್ತೇನೆ ಎಂದಿದ್ದರು. ಇದೀಗ ತಮ್ಮ ಹೇಳಿಕೆಯಂತೆ ಇಕ್ಬಾಲ್ಗೆ ನೋಟಿಸ್ ರವಾನಿಸಲಾಗಿದೆ.
ಅತ್ತ ಇಕ್ಬಾಲ್ ಸಿಎಂ ಬದಲಾವಣೆ ಕುರಿತು ಹೇಳಿಕೆ ನೀಡುವಾಗ ತಾನು ಮಾತ್ರವಲ್ಲ ಇನ್ನೂ 100 ಮಂದಿ ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಮತ್ತೊಂದು ಬಾಂಬ್ ಸಿಡಿಸಿದ್ದರು. ಈ ಎಲ್ಲ ಹೇಳಿಕೆಗಳಿಗೆ ಯಾವ ಸಮಜಾಯಿಷಿ ನೀಡುತ್ತಾರೋ ಕಾದು ನೋಡಬೇಕಿದೆ.
ನಾನೊಬ್ಬನೇ ಅಲ್ಲ 100 ಶಾಸಕರು ಸಿಎಂ ಬದಲಾವಣೆ ಬೇಕೆಂದಿದ್ದಾರೆ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್!
ಎಐ ಕನ್ನಡ ಕೃಷಿ ವೆಬ್ಸೈಟ್ಗೆ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


