Wednesday, November 4, 2026
spot_img
More
    spot_img
    HomeLatest newsಯಾವ ಕ್ರಾಂತಿಯೂ ಆಗಲ್ಲ, ಬಿಜೆಪಿ ತಿರುಕನ ಕನಸು ಕಾಣುತ್ತಿದೆ: ದಿನೇಶ್‌ ಗುಂಡೂರಾವ್

    ಯಾವ ಕ್ರಾಂತಿಯೂ ಆಗಲ್ಲ, ಬಿಜೆಪಿ ತಿರುಕನ ಕನಸು ಕಾಣುತ್ತಿದೆ: ದಿನೇಶ್‌ ಗುಂಡೂರಾವ್

    ಮಂಗಳೂರು: ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

    ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂಬ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ಹಾಗೂ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಆರ್.‌ಅಶೋಕ್‌ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಕ್ರಾಂತಿ ಅಂತಹ ಪದಗಳು ಸರಿಯಲ್ಲ. ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಸ್ಪಷ್ಟಪಡಿಸಿದರು.

    ಇನ್ನು ಮೂರು ತಿಂಗಳಿನಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ. ಅದು ತಿರುಕನ ಕನಸು. ಜನ ಬಿಜೆಪಿಗರನ್ನು ಮನೆಗೆ ಕಳಿಸಿದ್ದಾರೆ. ನಮ್ಮ ಬಟ್ಟಲಲ್ಲಿ ಸೊಳ್ಳೆ ಇದ್ರೆ ಅವರ ಬಟ್ಟಲಿನಲ್ಲಿ ಹೆಗ್ಗಣ ಬಿದ್ದಿದೆ ಎಂದು ಕಿಡಿಕಾರಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ರಣದೀಪ್‌ ಸಿಂಗ್‌ ಸುರ್ಜೇವಾಲಾ ಕಾಂಗ್ರೆಸ್‌ ಎಲ್ಲಾ ಶಾಸಕರನ್ನು ಭೇಟಿಯಾಗಲಿದ್ದಾರೆ. ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ನಮ್ಮದು ದೊಡ್ಡ ಪಕ್ಷ. ಆದ್ದರಿಂದ ಎಲ್ಲರ ಅಭಿಪ್ರಾಯ ಬೇರೆ ಬೇರೆ ಇರುತ್ತವೆ. ನಮ್ಮ ಆಂತರಿಕ ಸಮಸ್ಯೆಯನ್ನು ನಾವೇ ಬಗೆಹರಿಸುತ್ತೇವೆ. ಸಿಎಂ ಜೊತೆ ಬಿ.ಆರ್.ಪಾಟೀಲ್‌ ಮಾತನಾಡಿದ್ದಾರೆ. ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಮಾಹಿತಿ ನೀಡಲಿ. ಇಡೀ ದೇಶದಲ್ಲಿ ಭ್ರಷ್ಟಾಚಾರ ಇದೆ. ಇಲ್ಲ ಎಂದು ಹೇಳಲ್ಲ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕು ಎಂದರು.

    ಸುರ್ಜೇವಾಲ ಮುಂದೆ ಕೋಲಾರ ಗುಂಪುಗಾರಿಕೆ ಹಾಗೂ ದ್ವೇಷ ರಾಜಕಾರಣದ ದೂರುಗಳ ಸುರಿಮಳೆ; ಭೈರತಿ ಸುರೇಶ್‌ ವಿರುದ್ಧ ದೂರು!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search