ಆರ್‌ಎಸ್‌ಎಸ್‌ನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸಂವಿಧಾನದ ಕುರಿತು ನೀಡಿದ ಹೇಳಿಕೆ ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಆರ್‌ಎಸ್‌ಎಸ್ ವಿರುದ್ಧ ತಿರುಗಿಬಿದ್ದಿದೆ.
ಭಾಷಣವೊಂದರಲ್ಲಿ ದತ್ತಾತ್ರೇಯ ಹೊಸಬಾಳೆ ಅಂಬೇಡ್ಕರ್ ರಚಿಸಿದ್ದ ಸಂವಿಧಾನದಲ್ಲಿ ಜಾತ್ಯಾತೀತ ಹಾಗೂ ಸಮಾಜವಾದ ಎಂಬ ಪದಗಳೇ ಇರಲಿಲ್ಲ, ಬಳಿಕ ಕಾಂಗ್ರೆಸ್ ಆ ಎರಡು ಪದಗಳನ್ನು ಸೇರಿಸಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಆ ಎರಡು ಪದಗಳನ್ನು ಸಂವಿಧಾನದಿಂದ ತೆಗೆಯಬೇಕು ಎಂದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರು ದತ್ತಾತ್ರೇಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಸಹ ಈ ಕುರಿತು ಮಾತನಾಡಿದ್ದು, ಆರ್‌ಎಸ್‌ಎಸ್ ನಿಷೇಧ ಹಿಂಪಡೆದದ್ದೇ ತಪ್ಪು, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೋಡೋಣ ಎಂದಿದ್ದಾರೆ. ಈ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಆಗಲಿದೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿಗಳಲ್ಲಿ ಭಾಗವಹಿಸಲಿಲ್ಲ, ಸ್ವಾತಂತ್ರ ಹೋರಾಟಗಳಲ್ಲಿ ಕೈಜೋಡಿಸಲಿಲ್ಲ, ಸ್ವಾತಂತ್ರ ಸಿಕ್ಕ ದಿನ ತಿರಂಗ ಧ್ವಜವನ್ನು ವಿರೋಧಿಸಿತ್ತು, ಗಾಂಧಿ ಸತ್ತಾಗ ಸಿಹಿ ಹಂಚಿದ್ದರು ಹಾಗೂ ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿಗೆ ತರಲು ಹೋರಾಡಿದರು ಎಂದು ಬರೆದುಕೊಡು ಟೀಕಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಕಂಡರೆ ಬಿಜೆಪಿಯವರಿಗೆ ಭಯ; ಸಚಿವ ಶರಣ ಪ್ರಕಾಶ್ ಪಾಟೀಲ್ ವ್ಯಂಗ್ಯ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


