ಬೆಂಗಳೂರು;ಇತ್ತೀಚೆಗೆ ದೊಡ್ಡ ದೊಡ್ಡ ಬಹುರಾಷ್ಟ್ರೀಯ ಕಂಪನಿಗಳಲ್ಲೂ ವಿವಿಧ ಕಾರಣಗಳಿಂದಾಗಿ ಉದ್ಯೋಗ ಕಡಿತ(Lay off) ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಖಾಸಗಿ ಕ್ಷೇತ್ರದ ಉದ್ಯೋಗಿಗಳಲ್ಲಿ ಉದ್ಯೋಗ ಭದ್ರತೆ ಬಗ್ಗೆ ಆತಂಕ ಹೆಚ್ಚಿದ್ದು, ಭವಿಷ್ಯವನ್ನು ಕುರಿತ ಚಿಂತೆಗಳು ಗಂಭೀರವಾಗಿವೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಅತ್ಯಧಿಕ ಸಂಬಳ ಪಡೆಯುತ್ತಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ಕೆಲಸ ಕಳೆದುಕೊಂಡ ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರ ಪೋಸ್ಟ್ ಇದೀಗ ವೈರಲ್ ಆಗಿದೆ.
ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (NIT)ಯಿಂದ ಪದವಿ ಪಡೆದ ಟಾಪ್-ಪರ್ಫಾರ್ಮಿಂಗ್ ಎಂಜಿನಿಯರ್ ಸಲೀಂ ಅವರ ಕಥೆಯನ್ನು ಹಂಚಿಕೊಳ್ಳಲಾಗಿದೆ. ಸಲೀಂ ಅವರು ಬೆಂಗಳೂರು ಮೂಲದ ಪ್ರಮುಖ ಟೆಕ್ ಕಂಪನಿಯಲ್ಲಿ ವಾರ್ಷಿಕ ₹43.5 ಲಕ್ಷ ಸಂಬಳದೊಂದಿಗೆ ಕೆಲಸ ಮಾಡುತ್ತಿದ್ದರು. ಕಳೆದ ಐದು ವರ್ಷಗಳಲ್ಲಿ ಅವರು ₹30 ಲಕ್ಷಕ್ಕಿಂತ ಹೆಚ್ಚು ಆದಾಯ ತೆರಿಗೆ ಪಾವತಿಸಿದ್ದರು. ಆದರೆ, ಕಂಪನಿಯಿಂದ ದಿಢೀರ್ ಲೇ-ಆಫ್ ಆಗಿ ಕೇವಲ ಮೂರು ತಿಂಗಳ ಸಂಬಳ ನೀಡಿ ಕೆಲಸದಿಂದ ಹೊರಗಿಡಲಾಯಿತು. ಈಗ ಮಕ್ಕಳ ವಿದ್ಯಾಭ್ಯಾಸಕ್ಕೆ ವರ್ಷಕ್ಕೆ ₹1.95 ಲಕ್ಷ ವೆಚ್ಚವಾಗುತ್ತಿದೆ. ಕೆಲಸ ಇಲ್ಲದ ಕಾರಣ, ಕುಟುಂಬದ ಭವಿಷ್ಯ, ಸಾಲ, ಮಕ್ಕಳ ಶಿಕ್ಷಣ ಎಲ್ಲವೂ ಸಂಕಷ್ಟದಲ್ಲಿದೆ. ಈ ಹಿನ್ನಲೆಯಲ್ಲಿ ಸಲೀಂ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ.ಈ ಘಟನೆಯು ಖಾಸಗಿ ಉದ್ಯೋಗ ಕ್ಷೇತ್ರದಲ್ಲಿ ಉದ್ಯೋಗ ಭದ್ರತೆ ಕೊರತೆ ಮತ್ತು ಆರ್ಥಿಕ ಅನಿಶ್ಚಿತತೆ ಕುರಿತು ಹೊಸ ಚರ್ಚೆಗೆ ನಾಂದಿ ಹಾಡಿದೆ.

ಸಲೀಂ, ನಾನು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ಪಾವತಿಸಿದ್ದೇನೆ. ಆದರೆ ನನಗೆ ಯಾವುದೇ ನೆರವು ಸಿಗಲಿಲ್ಲ. ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದೇನೆ. ದೇಶಕ್ಕೆ ಕೊಡುಗೆ ನೀಡಿದರೂ, ಸಂಕಷ್ಟದಲ್ಲಿ ಸರ್ಕಾರ ಬೆಂಬಲ ನೀಡುತ್ತಿಲ್ಲ, ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಹೀಗೆ ಉದ್ಯೋಗ ಕಳೆದುಕೊಂಡ ಟೆಕ್ಕಿ ತಮ್ಮ ನಿಜವಾದ ಹೆಸರು ಐಡೆಂಟಿಟಿಯನ್ನು ಗೌಪ್ಯವಾಗಿ ಇಡಲು ವೆಂಕಟೇಶ್ ಅಲ್ಲಾರನ್ನು ಕೇಳಿಕೊಂಡಿದ್ದಾರೆ. ಹೀಗಾಗಿ ಅವರ ಇನ್ಷಿಯಲ್ ಆದ ಸಲೀಂ ಎಂಬ ಹೆಸರು ಅನ್ನು ಮಾತ್ರ ಪೋಸ್ಟ್ನಲ್ಲಿ ಹಂಚಿಕೊಂಡಿದ್ದೇನೆ ಎಂದು ವೆಂಕಟೇಶ್ ಟ್ವೀಟ್ ಮಾಡಿದ್ದಾರೆ.
ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಹಲವರು, ತೆರಿಗೆ ಪಾವತಿಸಿದರೆ ಅದು ನಿರುದ್ಯೋಗ ಭತ್ಯೆಗೆ ಸಮಾನವಲ್ಲ. ಜಾಬ್ ಕಳೆದುಕೊಂಡರೆ ಅದಕ್ಕೆ ಸರ್ಕಾರ ಹೊಣೆಗಾರ ಅಲ್ಲ, ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನೊಬ್ಬರು, ಭಾರತದಲ್ಲಿ ಯುರೋಪ್ ಅಥವಾ ಅಮೆರಿಕದ ಮಾದರಿಯ ನಿರುದ್ಯೋಗ ಭತ್ಯೆ ವ್ಯವಸ್ಥೆ ಸಾಧ್ಯವಿಲ್ಲ, ಎಂದಿದ್ದಾರೆ. ಆದರೆ, ಕೆಲವರು ಉದ್ಯೋಗ ನಷ್ಟದ ಸಂದರ್ಭದಲ್ಲಿ ಆರ್ಥಿಕ ಹಾಗೂ ಮಾನಸಿಕ ಬೆಂಬಲ ವ್ಯವಸ್ಥೆ ರೂಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು, ಎಂದು ಆಗ್ರಹಿಸಿದ್ದಾರೆ.ಇತ್ತೀಚೆಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಕಡಿತ ಹೆಚ್ಚಾಗುತ್ತಿರುವುದರಿಂದ, ಉದ್ಯೋಗ ಭದ್ರತೆ ಮತ್ತು ಸಂಕಷ್ಟದ ಸಮಯದಲ್ಲಿ ಸರ್ಕಾರದ ಬೆಂಬಲದ ಅಗತ್ಯತೆ ಕುರಿತು ಚರ್ಚೆ ಜೋರಾಗಿದೆ. ಪ್ರಾಮಾಣಿಕ ತೆರಿಗೆ ಪಾವತಿದಾರರಿಗೆ ರಕ್ಷಣೆ ಮತ್ತು ಬೆಂಬಲ ನೀಡುವ ವ್ಯವಸ್ಥೆ ರೂಪಿಸುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಹೆಚ್ಚಾಗಿದೆ.
ಗ್ರಾಹಕರಿಗೆ ಸಿಹಿ ಸುದ್ದಿ ಇಂದಿನಿಂದ ಎಲ್ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ದರ ಇಳಿಕೆ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


