ಬೆಂಗಳೂರು : ಸುಳ್ಳು ಸುದ್ದಿ ಹಾಗೂ ದ್ವೇಷಪೂರಿತ ಪ್ರಚಾರಗಳ ವಿರುದ್ಧ ಕಠಿಣ ಕಾನೂನು ರೂಪಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ವಿಧಾನಸೌಧದ ಗೃಹ ಸಚಿವರ ಕಚೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಮ್, ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ದೇಶಾದ್ಯಂತ ಭಾರಿ ತಲೆನೋವಾಗಿರುವ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವುದು, ಆನ್‍ಲೈನ್ ಗ್ಯಾಂಬ್ಲಿಂಗ್, ದ್ವೇಷ ಭಾಷಣ ಹಾಗೂ ಭಾವನಾತಕ ಪ್ರಚೋದನೆಗಳ ವಿರುದ್ಧ ಕಠಿಣ ಕಾನೂನುಗಳನ್ನು ತರಲು ರಾಜ್ಯಸರ್ಕಾರ ಮುಂದಾಗಿದೆ.
ಈ ಮೊದಲು ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಶಾಸಕರು ಆನ್‍ಲೈನ್ ಗೇಮ್‍ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅನಂತರ ಕೆಲವು ಘಟನೆಗಳಲ್ಲಿ ಆನ್‍ಲೈನ್ ಗೇಮ್ ಚಟಕ್ಕೆ ಒಳಗಾದ ಕೆಲವರು ಆತಹತ್ಯೆ ಮಾಡಿಕೊಂಡಿದ್ದ ಪ್ರಕರಣಗಳು ವರದಿಯಾಗಿದ್ದವು. ಮುಂದಿನ ಅಧಿವೇಶನದ ಒಳಗೆ ಕಠಿಣ ಕಾನೂನುಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ. ಅದೇ ರೀತಿ ಸುಳ್ಳು ಸುದ್ದಿಗಳು ವದಂತಿಗಳು ಸಾರ್ವಜನಿಕ ವಲಯದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿ ಕೊಡುತ್ತಿವೆ. ಅವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆಗಳಾಗಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಭೆಯ ಅಧ್ಯಕ್ಷತೆ ವಹಿಸಿದ ಸಚಿವ ಪರಮೇಶ್ವೆರ್ ಗೃಹ ಇಲಾಖೆಯಿಂದ ರೂಪಿಸಬೇಕಾದ ನಿಯಮಾವಳಿಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಬಿಎಸ್ಎನ್ಎಲ್ ರೂ.1 ಪ್ಲಾನ್: ಕೇವಲ ₹1ಕ್ಕೆ ಆಜಾದಿ ಕಾ ಪ್ಲಾನ್ ನಂಬಲಾಗದ ಕೊಡುಗೆಗಳೊಂದಿಗೆ ಲಭ್ಯ!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


