ಬೆಂಗಳೂರು: ಕೆಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ್ ಭಟ್ ಜುಲೈ 29ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ( ಆಗಸ್ಟ್ 1 ) ತೀರ್ಪನ್ನು ನೀಡಿದ್ದಾರೆ.
ಇನ್ನು ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಅವಧಿ ಎಷ್ಟೆಂಬುದನ್ನು ನ್ಯಾಯಾಲಯ ಇನ್ನೂ ಪ್ರಕಟಿಸಬೇಕಿದ್ದು, ಕನಿಷ್ಟ 10 ವರ್ಷ ಗರಿಷ್ಟ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.
ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಕಣ್ಣೀರಿಡುತ್ತಲೇ ಅಲ್ಲಿಂದ ತೆರಳಿದ್ದಾರೆ.
ತಲೆಹೊಟ್ಟಿನ ಸಮಸ್ಯೆಗೆ ನೈಸರ್ಗಿಕ ಪರಿಹಾರ: ಈ ಆಯುರ್ವೇದಿಕ್ ಮನೆಮದ್ದು ಟ್ರೈ ಮಾಡಿ
ಎಐ ಕನ್ನಡ ಕೃಷಿ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


