Tuesday, September 1, 2026
spot_img
More
    spot_img
    HomeLatest newsದೆಹಲಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

    ದೆಹಲಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ದೆಹಲಿಗೆ ತೆರಳಿದ್ದು, ಎರಡು ದಿನಗಳ ಕಾಲ ದೆಹಲಿಯಲ್ಲಿ ಉಳಿದು, ಪಕ್ಷ ಹಾಗೂ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

    Advertisement


    ಕಳೆದ ಒಂದು ತಿಂಗಳ ಈಚೆಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ 5ನೇ ದೆಹಲಿ ಭೇಟಿ ಇದಾಗಿದೆ. ಪಕ್ಷದ ವಿವಿಧ ಸಭೆ ಸಮಾರಂಭಗಳಲ್ಲಿ ಭಾಗವಹಿಸಲು ಇಬ್ಬರೂ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ದೆಹಲಿಗೆ ತೆರಳುತ್ತಿದ್ದಾರೆ ಎಂಬಂತೆ ಕಂಡು ಬಂದರೂ, ಆಂತರಿಕವಾಗಿ ಇಬ್ಬರ ನಡುವೆ ಇರುವ ಅಸಮಾಧಾನಗಳನ್ನು ಸರಿಪಡಿಸುವ ಕಸರತ್ತು ದೆಹಲಿಯಲ್ಲಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.


    ನಾಯಕತ್ವದ ವಿಚಾರವಾಗಿ ಡಿ.ಕೆ. ಶಿವಕುಮಾರ್ ಬಣ ಸಿದ್ದರಾಮಯ್ಯ ಅವರ ವಿರುದ್ಧ ನಾನಾ ವದಂತಿಗಳು ಹರಡಿತ್ತು. ದೆಹಲಿಯ ವರಿಷ್ಠರ ಜೊತೆ ಚರ್ಚೆ ನಡೆಸುವ ಮುನ್ನ ಸಿದ್ದರಾಮಯ್ಯ ತಾವು 5 ವರ್ಷ ಅಧಿಕಾರದಲ್ಲಿ ಮುಂದುವರೆಯಲಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲವಿಲ್ಲ ಎಂದಿದ್ದರು.


    ಅದರ ನಂತರ ಶಾಸಕರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗಿನ ಸಭೆಗೆ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ಅವರನ್ನು ಹೊರಗಿಟ್ಟಿದ್ದರು. ಇದು ಸಾಮಾನ್ಯ ಎಂದು ಬಿಂಬಿಸುವ ಪ್ರಯತ್ನ ನಡೆಯಿತ್ತಾದರೂ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನಡುವೆ ಸೌಹಾರ್ದತೆ ಇಲ್ಲ ಎಂದು ಸ್ಪಷ್ಟವಾಗಿದೆ.


    ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ ಬೆಂಗಳೂರಿನಲ್ಲಿ ಶಾಸಕರು, ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿ, ಕೆಲ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದರು. ಅದರ ಮುಂದುವರೆದ ಭಾಗವಾಗಿ ಸಿದ್ದರಾಮಯ್ಯ, ಶಾಸಕರು, ಸಚಿವರ ಬಗ್ಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.


    ಪಕ್ಷದ ಪ್ರಮುಖ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಸಭೆಯಲ್ಲಿ ಅವಕಾಶ ನೀಡದಿರುವುದು ನಾನಾ ರೀತಿಯ ಚರ್ಚೆಗಳಿಗೆ ಕಾರಣವಾಗಿತ್ತು. ಮುಖ್ಯಮಂತ್ರಿಯವರು ಆ. 7ರಂದು ನಡೆಸಲಿರುವ ರಾಮನಗರ ಜಿಲ್ಲೆಯ ಶಾಸಕರು ಹಾಗೂ ಸಚಿವರ ಸಭೆಗೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ್ದಾರೆ. ಈ ಮೂಲಕ ಎಲ್ಲಾ ಶಾಸಕರಂತೆಯೇ ಡಿ.ಕೆ.ಶಿವಕುಮಾರ್ ಕೂಡ ಒಬ್ಬ ಶಾಸಕರು ಎಂಬ ಸಾಮಾನ್ಯ ಧೋರಣೆಯನ್ನು ಮುಖ್ಯಮಂತ್ರಿಯವರು ಹೊಂದಿರುವಂತೆ ಕಂಡುಬರುತ್ತಿದೆ.


    ಇದು ಡಿ.ಕೆ. ಶೀವಕುಮಾರ್ ಅವರ ಬಣಕ್ಕೆ ಅಪಥ್ಯವಾಗಿದ್ದು, ಒಳಗೊಳಗೆ ಅಸಮಾಧಾನ ಮಡುಗಟ್ಟಿದೆ. ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿ ಆ. 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಪೂರ್ವ ಸಿದ್ಧತೆಗಳ ಬಗ್ಗೆ ಸಭೆ ಹಾಗೂ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆಯಲ್ಲೂ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಹೊಂದಾಣಿಕೆ ಅಷ್ಟಕಷ್ಟೇ ಎಂಬಂತೆ ಕಂಡು ಬರುತ್ತಿದೆ.


    ಈ ಮೊದಲಿನಿಂದಲೂ ನಾಯಕತ್ವದ ವಿಚಾರವಾಗಿ ಇಬ್ಬರ ನಡುವೆ ಮುಸುಕಿನ ಗುದ್ದಾಟ ಕೇಳಿಬರುತ್ತಲೇ ಇದ್ದು, ದೆಹಲಿಯಲ್ಲಿ ಪದೇ-ಪದೇ ಸಂಧಾನ ಸಭೆ ನಡೆಸುವ ಪರಿಸ್ಥಿತಿ ಎದುರಾಗಿದೆ.

    ಬಿಎಸ್ಎನ್ಎಲ್ ರೂ.1 ಪ್ಲಾನ್: ಕೇವಲ ₹1ಕ್ಕೆ ಆಜಾದಿ ಕಾ ಪ್ಲಾನ್ ನಂಬಲಾಗದ ಕೊಡುಗೆಗಳೊಂದಿಗೆ ಲಭ್ಯ!

    ಎಐ ಕೃಷಿ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading