ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಳೆದ 14 ತಿಂಗಳಿಂದ ಸೆರೆಮನೆಯಲ್ಲಿ ಬಂಧಿಯಾಗಿದ್ದಾರೆ. ಈ ಪ್ರಕರಣದಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಅದರಂತೆ ಇಂದು ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ನಾಳೆ (ಆಗಸ್ಟ್ 2) ಪ್ರಕಟಿಸಲಿದೆಈ ತೀರ್ಪು ಹಿನ್ನೆಲೆಯಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, “ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ”. ಎಂದು ಬರೆದುಕೊಂಡಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ರಮ್ಯಾ, ರಾಜ್ಯದ ಹಲವಾರು ಮಹತ್ವದ ಘಟನೆಗಳ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿ ಇರುತ್ತಾರೆ. ವಿಶೇಷವಾಗಿ ಮಹಿಳೆಯರ ಹಕ್ಕುಗಳಿಗಾಗಿ ಧ್ವನಿ ಎತ್ತುವ ಮೂಲಕ ಗಮನ ಸೆಳೆದಿದ್ದಾರೆ.ಆದರೆ ಈ ಪ್ರಕರಣವು ಹೈಕೋರ್ಟ್‌ಲ್ಲಿ ಅಲ್ಲದೆ, ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟದ್ದರಿಂದ, ಅವರು ಹೈಕೋರ್ಟ್‌ಗೆ ಅಭಿನಂದನೆ ಸಲ್ಲಿಸಿರುವುದು ತಪ್ಪು ಗ್ರಹಿಕೆಗೆ ಕಾರಣವಾಗಿದೆ.ಕೆ.ಆರ್ ನಗರ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು, ನ್ಯಾಯಾಲದ ತೀರ್ಪು ಕೇಳಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಆಗಿದೆ
ಬಿಎಸ್ಎನ್ಎಲ್ ರೂ.1 ಪ್ಲಾನ್: ಕೇವಲ ₹1ಕ್ಕೆ ಆಜಾದಿ ಕಾ ಪ್ಲಾನ್ ನಂಬಲಾಗದ ಕೊಡುಗೆಗಳೊಂದಿಗೆ ಲಭ್ಯ!
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


