Wednesday, November 4, 2026
spot_img
More
    spot_img
    HomeBreaking Newsಜಮೀರ್ ಗೆ 2 ಕೋಟಿ ರೂ. ಸಾಲ ನೀಡಿದ್ದ ರಾಧಿಕಾ ಕುಮಾರಸ್ವಾಮಿ: ಲೋಕಾಯುತ್ತ ತನಿಖೆ

    ಜಮೀರ್ ಗೆ 2 ಕೋಟಿ ರೂ. ಸಾಲ ನೀಡಿದ್ದ ರಾಧಿಕಾ ಕುಮಾರಸ್ವಾಮಿ: ಲೋಕಾಯುತ್ತ ತನಿಖೆ

    ಜಮೀರ್ ಅಹ್ಮದ್ ಖಾನ್ ಅವರಿಗೆ ನಟಿ ರಾಧಿಕಾ ಕುಮಾರಸ್ವಾಮಿ ಎರಡು ಕೋಟಿ ರೂಪಾಯಿ ಸಾಲ ನೀಡಿದ್ದರು ಎನ್ನುವ ಸಂಗತಿ ಹೊರಬಿದ್ದಿದೆ. ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಈ ವಿಷಯ ತಿಳಿದುಬಂದಿದೆ.

    ಅಕ್ರಮ ಆಸ್ತಿ ಸಂಪಾದನೆ ಸಂಬಂಧ ಲೋಕಾಯುಕ್ತ ಪೊಲೀಸರು ಜಮೀರ್ ಅಹ್ಮದ್ ಅವರ ಆದಾಯ ಮೂಲಗಳನ್ನು ಪರಿಶೀಲಿಸಿದಾಗ ಸಾಲ ಕೊಟ್ಟವರ ಪಟ್ಟಿ ಸಿಕ್ಕಾಗ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಕಂಡುಬಂದಿದೆ. ಹಾಗಾಗಿ ನೋಟಿಸ್ ನೀಡಿ ರಾಧಿಕಾ ಕುಮಾರಸ್ವಾಮಿ ಅವರಿಂದ ಲೋಕಾಯುಕ್ತ ಪೊಲೀಸರು ವಿವರಣೆ ಪಡೆದುಕೊಂಡಿದ್ದಾರೆ.

    ಜಮೀರ್ ಅಹ್ಮದ್ ಗೆ ಸಾಲ ನೀಡಿರುವುದನ್ನು ಒಪ್ಪಿಕೊಂಡು ರಾಧಿಕಾ ಕುಮಾರಸ್ವಾಮಿಗೆ ಹೇಳಿಕೆ ನೀಡಿದ್ದಾರೆ.ಸಿನಿಮಾದಲ್ಲಿ ಸಂಪಾದಿಸಿದ ಹಣದಲ್ಲಿ ₹2 ಕೋಟಿಯನ್ನು ಸಚಿವರಿಗೆ ನೀಡಿದ್ದೆ‌ಎಂದು ರಾಧಿಕಾ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ.

    2019 ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಚಿವರಾಗಿದ್ದ ಜಮೀರ್ ಅಹ್ಮದ್ ಖಾನ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಎಸಿಬಿ ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ನಂತರ ಪ್ರಕರಣದ ತನಿಖೆ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆಯಾಗಿತ್ತು. ಲೋಕಾಯುಕ್ತ ಪೊಲೀಸರು ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ತಾವು ಸಾಲ ಪಡೆದಿರುವ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಜಮೀರ್ ಅಹ್ಮದ್ ಖಾನ್ ಪಟ್ಟಿ ನೀಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search