Tuesday, November 3, 2026
spot_img
More
    spot_img
    HomeLatest newsನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಏರಿಕೆ: ಇಂದಿನಿಂದಲೇ ಜಾರಿ

    ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಏರಿಕೆ: ಇಂದಿನಿಂದಲೇ ಜಾರಿ

    ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ದರಗಳ ನಡುವೆ, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಸಂಚರಿಸುವ ವಾಹನಗಳಿಗೆ ಟೋಲ್ ದರಗಳು ಏರಿಕೆಯಾಗಿದ್ದು, ಇಂದಿನ (ಸೆಪ್ಟೆಂಬರ್ 1, 2025) ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಈ ದರ ಹೆಚ್ಚಳದಿಂದಾಗಿ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಯಾವ ವಾಹನಗಳಿಗೆ ಎಷ್ಟು ಏರಿಕೆ?

    ದೊಡ್ಡಕರೇನಹಳ್ಳಿ ಮತ್ತು ಕಾರಬೈಲು ಟೋಲ್ ಪ್ಲಾಜಾಗಳಲ್ಲಿ ಈ ದರ ಹೆಚ್ಚಳ ಮಾಡಲಾಗಿದೆ.

    ಕಾರು, ಜೀಪ್, ವ್ಯಾನ್‌ಗಳು:

    ಫಾಸ್ಟ್‌ಟ್ಯಾಗ್ ಇದ್ದರೆ: ಏಕಮುಖ ಸಂಚಾರಕ್ಕೆ ₹55 ರಿಂದ ₹60 ಕ್ಕೆ ಏರಿಕೆ. ದಿನದ ಸಂಚಾರಕ್ಕೆ ₹85 ರಿಂದ ₹90 ಕ್ಕೆ ಹೆಚ್ಚಳ.

    ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ: ಏಕಮುಖ ಸಂಚಾರಕ್ಕೆ ₹110 ರಿಂದ ₹120 ಕ್ಕೆ ಏರಿಕೆ.

    ಲಘು ವಾಣಿಜ್ಯ ಮತ್ತು ಸರಕು ವಾಹನಗಳು:

    ಏಕಮುಖ ಸಂಚಾರಕ್ಕೆ ₹100 ದರ ಹೆಚ್ಚಿಸಲಾಗಿದೆ.

    ದಿನದ ಸಂಚಾರಕ್ಕೆ ₹155 ದರ ಏರಿಕೆಯಾಗಿದೆ.

    ಈ ದರ ಏರಿಕೆಯಿಂದಾಗಿ ಸಾಗಣೆ ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಇದು ಬೇರೆ ಬೇರೆ ಸ್ತರಗಳಲ್ಲೂ ಪರಿಣಾಮ ಬೀರಬಹುದು. ರಸ್ತೆ ನಿರ್ವಹಣೆ ವೆಚ್ಚದ ಏರಿಕೆಗೆ ಅನುಗುಣವಾಗಿ ದರಗಳನ್ನು ಹೆಚ್ಚಿಸಲಾಗಿದೆ ಎಂದು NHAI ಸಮರ್ಥನೆ ನೀಡಿದ್ದರೂ, ಸಾರ್ವಜನಿಕರು ತೀವ್ರ ಅಸಮಾಧಾನಗೊಂಡಿದ್ದಾರೆ. ಈ ನಿರ್ಧಾರವು ಪ್ರಯಾಣಿಕರ ಮೇಲೆ ಮತ್ತೊಂದು ಆರ್ಥಿಕ ಹೊರೆಯಾಗಿದೆ ಎಂದು ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

    ಜಿಎಸ್‌ಟಿ ಸ್ಲ್ಯಾಬ್ ಕಡಿತ ಕರ್ನಾಟಕಕ್ಕೆ ₹15,000 ಕೋಟಿ ನಷ್ಟ ;ಸಿಎಂ ಸಿದ್ದರಾಮಯ್ಯ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search