Tuesday, November 3, 2026
spot_img
More
    spot_img
    HomeLatest newsಪಿಂಚಣಿಗಾಗಿ ಅರ್ಜಿ ಹಾಕಿದ ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌; ತಿಂಗಳಿಗೆ ಎಷ್ಟು ರೂ?

    ಪಿಂಚಣಿಗಾಗಿ ಅರ್ಜಿ ಹಾಕಿದ ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌; ತಿಂಗಳಿಗೆ ಎಷ್ಟು ರೂ?

    ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಪಿಂಚಣಿ ಸವಲತ್ತಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

    ಮಾಜಿ ಶಾಸಕರ ಸವಲತ್ತುಗಳಿಗಾಗಿ ಜಗದೀಪ್‌ ಧನಕರ್‌ ಅರ್ಜಿ ಸಲ್ಲಿಸಿದ್ದಾರೆ. 1993ರಿಂದ 1998ರವರೆಗೆ ಕಿಶನ್‌ ಗಢ ಸ್ಥಾನದಿಂದ ಶಾಸಕರಾಗಿದ್ದ ಹಿನ್ನೆಲೆಯಲ್ಲಿ ರಾಜಸ್ಥಾನ ವಿಧಾನಸಭೆಯಲ್ಲಿ ಜಗದೀಪ್‌ ಧನಕರ್‌ ಅರ್ಜಿ ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ಸಲ್ಲಿಸಿರುವ ಪಿಂಚಣಿ ಅರ್ಜಿಯ ಅನುಮೋದನೆ ಪ್ರಕ್ರಿಯೆ ಆರಂಭವಾಗಿದೆ. ಜಗದೀಪ್‌ ಧನಕರ್‌ ಅವರು ಪ್ರಯಾಣ ಹಾಗೂ ಮೆಡಿಕಲ್‌ ಸವಲತ್ತುಗಳ ಜೊತೆಗೆ ತಿಂಗಳಿಗೆ 42000 ರೂ ಪಿಂಚಣಿ ಪಡೆಯುವ ಅರ್ಹತೆ ಹೊಂದಿದ್ದಾರೆ.

    ಜಗದೀಪ್‌ ಧನಕರ್‌ ಅವರು ಇತ್ತೀಚೆಗೆ ಆರೋಗ್ಯಕ್ಕೆ ಸಂಬಂಧಿಸಿದ ಕಾರಣಗಳನ್ನು ನೀಡಿ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ನಂತರ, ಧನಕರ್‌ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಹಾಗೂ ಬೇರೆ ಯಾವುದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ. ಅವರು ಯಾವುದೇ ಹೇಳಿಕೆಗಳನ್ನು ಸಹ ನೀಡಿಲ್ಲ.

    ಕಳೆದ ತಿಂಗಳು ಹಠಾತ್ತನೇ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್‌ ಧನಕರ್‌ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುವುದರ ಜೊತೆಗೆ ನಿಯಮಿತವಾಗಿ ಯೋಗಾಭ್ಯಾಸ ಮತ್ತು ಟೇಬಲ್‌ ಟೆನಿಸ್‌ ಆಡುತ್ತಿದ್ದಾರೆ. ಜುಲೈ.21ರಂದು ಹಠಾತ್ತನೇ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್.‌9ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

    ಡಿ.ಕೆ ಶಿವಕುಮಾರ್‌ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ; ಹೊಸ ಬಾಂಬ್‌ ಸಿಡಿಸಿದ ಯತ್ನಾಳ್!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search