Tuesday, November 3, 2026
spot_img
More
    spot_img
    HomeLatest newsಧರ್ಮಸ್ಥಳ ಚಲೋ ಮಾಡುತ್ತಿರುವ ನಿಖಿಲ್‌ ಅವರೇ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಖಂಡಿಸಿ ಹಾಸನ ಚಲೋ ಯಾವಾಗ?

    ಧರ್ಮಸ್ಥಳ ಚಲೋ ಮಾಡುತ್ತಿರುವ ನಿಖಿಲ್‌ ಅವರೇ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಖಂಡಿಸಿ ಹಾಸನ ಚಲೋ ಯಾವಾಗ?

    ಬೆಂಗಳೂರು: ಧರ್ಮಸ್ಥಳದಲ್ಲಿ ಅತ್ಯಾಚಾರ ಹಾಗೂ ಕೊಲೆಗಳು ನಡೆದಿವೆ ಎಂಬ ಆರೋಪದ ಮೇಲೆ ನಡೆಯುತ್ತಿರುವ ಎಸ್‌ಐಟಿ ತನಿಖೆಯ ವರದಿ ಬರುವ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ರಾಜಕೀಯವಾಗಿ ಇದನ್ನು ಉಪಯೋಗಿಸಿಕೊಳ್ಳಲು ಮುಂದಾಗಿವೆ.

    ಧರ್ಮಸ್ಥಳ ಧಾರ್ಮಿಕ ಸ್ಥಳ ಎಸ್‌ಐಟಿ ತನಿಖೆ ನೆಪದಲ್ಲಿ ಆ ಪವಿತ್ರ ಜಾಗಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡಬೇಕೆಂದು ಆಗ್ರಹಿಸಿ ಇಂದು ( ಸೆಪ್ಟೆಂಬರ್‌ 1 ) ಧರ್ಮಸ್ಥಳ ಚಲೋವನ್ನು ಹಮ್ಮಿಕೊಂಡಿದ್ದಾರೆ.

    ಎರಡೂ ಪಕ್ಷಗಳ ಈ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅದರಲ್ಲೂ ಜೆಡಿಎಸ್‌ ಈ ಯಾತ್ರೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ನೆಟ್ಟಿಗರು ನೇರವಾಗಿ ನಿಖಿಲ್‌ ಕುಮಾರಸ್ವಾಮಿಗೆ ಪ್ರಜ್ವಲ್‌ ರೇವಣ್ಣ ಪ್ರಕರಣಗಳನ್ನು ಮುಂದಿಟ್ಟು ಟಾಂಗ್‌ ಕೊಟ್ಟಿದ್ದಾರೆ.

    ಧರ್ಮಸ್ಥಳ ಚಲೋ ಮಾಡುವ ಮುನ್ನ ಮೊದಲು ಹಾಸನ ಚಲೋ ಮಾಡಿ ನಿಮ್ಮ ಸಹೋದರ ಪ್ರಜ್ವಲ್‌ ರೇವಣ್ಣನಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ನ್ಯಾಯ ಕೊಡಿಸಿ ಎಂದು ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

    ಪಿಂಚಣಿಗಾಗಿ ಅರ್ಜಿ ಹಾಕಿದ ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌; ತಿಂಗಳಿಗೆ ಎಷ್ಟು ರೂ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search