Tuesday, November 3, 2026
spot_img
More
    spot_img
    HomeLatest newsರಷ್ಯಾದಿಂದ ತೈಲ ಖರೀದಿಸಿದರೆ ಬ್ರಾಹ್ಮಣರು ಮಾತ್ರ ಶ್ರೀಮಂತರಾಗ್ತಾರೆ- ಪೀಟರ್

    ರಷ್ಯಾದಿಂದ ತೈಲ ಖರೀದಿಸಿದರೆ ಬ್ರಾಹ್ಮಣರು ಮಾತ್ರ ಶ್ರೀಮಂತರಾಗ್ತಾರೆ- ಪೀಟರ್

    ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ ಎಂದು ಡೊನಾಲ್ಡ್‌ ಟ್ರಂಪ್‌ ವ್ಯಾಪಾರ ಸಲಹೆಗಾರ ಪೀಟರ್ ಹೇಳಿದ್ದಾರೆ. ಭಾರತೀಯರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಉಪಯೋಗಿಸಿದ್ದಾರೆ ಪೀಟರ್.

    ಪೀಟರ್ ಈ ಹಿಂದೆ ರಷ್ಯಾ ಹಾಗೂ ಉಕ್ರೇನ್ ವಾರ್ ಅನ್ನು ಮೋದಿ ವಾರ್ ಎಂದು ಕರೆದು ವಿವಾದಾತ್ಮಕ ಹೇಳಿಕೆ‌ ನೀಡಿದ್ದರು. ಈಗ ಭಾರತೀಯ ಜಾತಿಯನ್ನ ಉಪಯೋಗಿಸಿಕೊಂಡು ಹೇಳಿಕೆ‌ ನೀಡಿ ಮತ್ತೊಂದು ವಿವಾದಕ್ಕೆ ಕಾರಣರಾಗಿದ್ದಾರೆ. ಇದು ಸತ್ಯಕ್ಕೆ ದೂರವಾದ, ಆಧಾರಹೀನ ಹೇಳಿಕೆ ಎಂದು ಜನರು ಹೇಳುತ್ತಿದ್ದಾರೆ.

    ಭಾರತೀಯ ಜನರಿಗೆ ಹೇಳಲು ಬಯಸುತ್ತೇನೆ. ದಯವಿಟ್ಟು ನಿಮ್ಮ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ರಷ್ಯಾ ಅಧ್ಯಕ್ಷ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆ ಭಾರತದ ಪ್ರಧಾನಿ ಮೋದಿ ಯಾಕೋ ಹೆಚ್ಚಾಗಿ ಮಾತಾಡುತ್ತಿದ್ದಾರೆ. ಭಾರತೀಯ ಜನರ ವೆಚ್ಚದಲ್ಲಿ ಬ್ರಾಹ್ಮಣರು ಲಾಭಗಳಿಸಿ ಶ್ರೀಮಂತರಾಗುತ್ತಿದ್ದಾರೆ ಎಂದು ಹೇಳುವ ಮೂಲಕ ಭಾರತ ಜನರಲ್ಲಿ ದ್ವೇಷದ ಕಿಡಿ ಹೊತ್ತಿಸಲು ಪ್ರಯತ್ನ ಪಟ್ಟಿದ್ದಾರೆ ಪೀಟರ್.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search