ಬೆಳ್ತಂಗಡಿ: ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಎಂಬುವವರು ನೀಡಿದ ದೂರಿನನ್ವಯ ಬೆಳ್ತಂಗಡಿ ಠಾಣೆ ಪೊಲೀಸರು, ಮಟ್ಟಣ್ಣನವರ್, ತಿಮರೋಡಿ, ಮದನ್ ಬುಗುಡಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮದನ್ ಬುಗುಡಿ ಅವರನ್ನು ಮಾನವ ಹಕ್ಕು ಆಯೋಗದ ಅಧಿಕಾರಿಯೆಂದು ಮಾಧ್ಯಮದ ಮುಂದೆ ಸುಳ್ಳು ಹೇಳಿದ್ದ ಮಟ್ಟಣ್ಣನವರ್, ಪ್ರಚಾರ ಪಡೆದಿದ್ದ, ಈ ಬಗ್ಗೆ ದೂರು ದಾಖಲಾಗಿತ್ತು.
ತಮಿಳುನಾಡಿಗೆ ಪರಾರಿಯಾಗಿದ್ದ ಬುಗುಡಿಯನ್ನು ಪತ್ತೆ ಹಚ್ಚಲಾಗಿದೆ ಮತ್ತು ವಿಚಾರಣೆ ನಡೆಸಲಾಗಿದೆಯೆಂದು ಮೂಲಗಳು ತಿಳಿಸಿವೆ.
ಈಗಾಗಲೇ ಚಿನ್ನಯ್ಯನ ಎರಡನೇ ಪತ್ನಿ ತಮಿಳುನಾಡಿನಲ್ಲಿದ್ದು, ಅವರನ್ನು ಕೂಡ ವಿಚಾರಣೆ ನಡೆಸಲಾಗಿದೆ. ಇನ್ನು ಚಿನ್ನಯ್ಯನ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೆÇಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತಷ್ಟು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭೂಕಂಪ: 622ಕ್ಕೇರಿದ ಸಾವಿನ ಸಂಖ್ಯೆ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


