ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯನ್ನು ಎನ್‌ಐಎಗೆ ವರ್ಗಾಯಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಂದು ( ಸೆಪ್ಟೆಂಬರ್ 1 ) ಧರ್ಮಸ್ಥಳ ಚಲೋ ಕೈಗೊಂಡಿದ್ದರು.
ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಬಾವುಟಗಳನ್ನು ಹಿಡಿದು ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಹಾಗೂ ವೀರೇಂದ್ರ ಹೆಗ್ಗಡೆ ಪರ ಘೋಷಣೆ ಕೂಗುತ್ತಾ ಧರ್ಮಸ್ಥಳ ಚಲೋದಲ್ಲಿ ಭಾಗವಹಿಸಿದ್ದರು.
ಧರ್ಮಸ್ಥಳ ಚಲೋ ಮುಗಿಸಿದ ಬಳಿ ಬಿಜೆಪಿ ಪಡೆ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲ್ಲಲ್ಪಟ್ಟ ಸೌಜನ್ಯ ಮನೆಗೂ ಸಹ ಭೇಟಿ ನೀಡಿದ್ದಾರೆ.
ವಿಜಯೇಂದ್ರ ಹಾಗೂ ಅವರ ಪಡೆ ಸೌಜನ್ಯ ಮನೆಗೆ ಭೇಟಿ ನೀಡಿ ಅವರ ಕಷ್ಟವನ್ನು ಆಲಿಸುವ ಕೆಲಸ ಮಾಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಸೌಜನ್ಯ ತಾಯಿ ಕುಸುಮಾವತಿ ವೀರೇಂದ್ರ ಹೆಗ್ಗಡೆ ಅವರ ಹೆಸರನ್ನು ಉಲ್ಲೇಖಿಸಿ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.
ಕುಸುಮಾವತಿ ಅವರು ನಾವು ನ್ಯಾಯ ಕೇಳುವುದೇ ತಪ್ಪಾ? ನ್ಯಾಯ ಕೇಳಿದರೆ ನಿಮ್ಮ ಪಕ್ಷದವರೇ ನಮ್ಮನ್ನು ಹಂಗಿಸುತ್ತಿದ್ದಾರೆ ಎಂದು ವಿಜಯೇಂದ್ರ ಮುಂದೆ ಅಳಲು ತೋಡಿಕೊಂಡರು. ಅಲ್ಲದೇ ಇದೇ ವೀರೇಂದ್ರ ಹೆಗ್ಗಡೆ ಅವರೇ ನಮ್ಮ ದೊಡ್ಡಪ್ಪನ ಬಳಿ ನಮ್ಮ ಮನೆಯಿಂದಲೇ ಅನ್ಯಾಯ ಆಗಿದೆ, ಇದನ್ನು ಇಲ್ಲಿಗೇ ನಿಲ್ಲಿಸಿಬಿಡಿ ಎಂದಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದ್ದಾರೆ.
ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಫ್ಘಾನಿಸ್ತಾನದಲ್ಲಿ ಭೂಕಂಪ: 622ಕ್ಕೇರಿದ ಸಾವಿನ ಸಂಖ್ಯೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


