ಬೆಂಗಳೂರು: ನಾಲ್ಕು ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಚಿವರಾದ ಮಂಡ್ಯದ ಎಂ.ಎಸ್. ಆತ್ಮಾನಂದ, ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಜ್ಞಾನ ಮೂರ್ತಿ ಅವರನ್ನು ನೇಮಿಸಲಾಗಿದೆ. ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆ.ವಿ.ರಾಮಪ್ರಸಾದ್ ಮತ್ತು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರಾಗಿ ಜಿ.ವಿ.ಬಾಲಾಜಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೋಮವಾರ 5 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಘೋಷಣೆಯಾಗಿತ್ತು. ಅದರ ಜೊತೆಗೆ ಬಿಎಂಟಿಸಿ ಅಧ್ಯಕ್ಷರಾಗಿ ಅಧಿ ಕಾರ ಸ್ವೀಕಾರ ಮಾಡಿದ್ದ ನಿಕೇತ್ ರಾಜ್ ಮೌರ್ಯಗೆ, ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ ನೀಡಿ ಸರ್ಕಾರ ಆದೇಶಿಸಿತ್ತು. ಬಿಎಂಟಿಸಿ ಅಧ್ಯಕ್ಷರಾಗಿ ಎ.ಎಸ್.ಆರಾಧ್ಯ ಅವರನ್ನು ನೇಮಕ ಮಾಡಲಾಗಿತ್ತು. ಇದರಿಂದಾಗಿ ಅದಾ ಗಲೇ ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿ ಸಿದ್ದ ನಿಕೇತ್ ರಾಜ್ ಮೌರ್ಯಗೆ ಮುಜುಗರ ಉಂಟಾದ ಪ್ರಸಂಗವೂ ನಡೆದಿತ್ತು.
ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದ ರಾಜು ಕಾಗೆ ಅವರನ್ನೂ ಹುದ್ದೆಯಿಂದ ಕೈಬಿಟ್ಟ ಬಗ್ಗೆ ಸುದ್ದಿಯಾಗಿ ಆರಂಭದಲ್ಲಿ ಒಂದಿಷ್ಟು ಗೊಂದಲಗಳು ಉಂಟಾಗಿದ್ದವು.
ಇಂಡಿಯನ್ ಬ್ಯಾಂಕ್‌ನ 171 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


