Monday, September 21, 2026
spot_img
More
    spot_img
    HomeLatest newsಬಿಹಾರ ಚುನಾವಣೆ: ಬಿಜೆಪಿಗೆ ಎಷ್ಟು ಸೀಟು ಪ್ರಶಾಂತ್ ಕಿಶೋರ್ ಲೆಕ್ಕಾಚಾರ!

    ಬಿಹಾರ ಚುನಾವಣೆ: ಬಿಜೆಪಿಗೆ ಎಷ್ಟು ಸೀಟು ಪ್ರಶಾಂತ್ ಕಿಶೋರ್ ಲೆಕ್ಕಾಚಾರ!

    ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಜನ್ ಸುರಾಜ್ ಪಕ್ಷದ ನಾಯಕ, ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಬಿಜೆಪಿ ವಿರುದ್ಧ ಸರಣಿ ಟೀಕೆಗಳನ್ನು ಮಾಡುತ್ತಿದ್ದಾರೆ. ಬಿಹಾರದಲ್ಲಿ ಜೆಡಿಯು ಜೊತೆ ಸೀಟು ಹಂಚಿಕೆ ಮಾಡಿಕೊಂಡು ಬಿಜೆಪಿ ಚುನಾವಣೆ ಎದುರಿಸುತ್ತಿದೆ.

    Advertisement

    “ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೇ ಬಿಜೆಪಿ ಚುನಾವಣೆಯನ್ನು ಗೆಲ್ಲುವುದು ಅಸಾಧ್ಯ. ವಿಶ್ವದ ಅತಿ ದೊಡ್ಡ ಪಕ್ಷ ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತಿಲ್ಲ. ಮುಖ್ಯಮಂತ್ರಿ ಅಭ್ಯರ್ಥಿಯೂ ಇಲ್ಲ” ಎಂದು ಪ್ರಶಾಂತ್ ಕಿಶೋರ್ ಬಿಜೆಪಿ ಸಂಕಷ್ಟವನ್ನು ಬಿಚ್ಚಿಟ್ಟಿದ್ದಾರೆ.

    “ಬಿಹಾರ ಚುನಾವಣೆಯಲ್ಲಿ ಬಿಜೆಪಿ 60-70 ಸೀಟುಗಳಲ್ಲಿ ಜಯಗಳಿಸಬಹುದು. ರಾಜ್ಯದಲ್ಲಿ ಪಕ್ಷಕ್ಕೆ ಮತಗಳನ್ನು ತಂದು ಕೊಡುವ ನಾಯಕನಿಲ್ಲ. ಆದ್ದರಿಂದ ಪಕ್ಷ ರಾಜ್ಯದಲ್ಲಿ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

    “ಬಿಜೆಪಿ 2014ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಬಿಹಾರದಲ್ಲಿ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಮತ್ತು 2015ರ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ರಾಜ್ಯದಲ್ಲೂ ಸ್ಪರ್ಧಿಸಲು ಪ್ರಯತ್ನ ಮಾಡಿತು. 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಣಕ್ಕಿಳಿದರು. ಆದರೆ ಗೆದ್ದಿದ್ದು 54-55 ಸೀಟುಗಳು. ಆ ಬಳಿಕವೇ ಬಿಜೆಪಿಗೆ ನಿತೀಶ್ ಕುಮಾರ್ ಅವರಂತಹ ನಾಯಕರೊಂದಿಗೆ ಮೈತ್ರಿ ಅಗತ್ಯ ಎಂದು ಅನ್ನಿಸಿತು” ಎಂದು ಪ್ರಶಾಂತ್ ಕಿಶೋರ್ ವಿಶ್ಲೇಷಿಸಿದ್ದಾರೆ.

    “ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಬಿಹಾರದಲ್ಲಿ ಬಿಜೆಪಿ ಸ್ವತಂತ್ರವಾಗಿ ಕಣಕ್ಕಿಳಿಯಲು ಸಾಧ್ಯವಿಲ್ಲ. ಆದರೆ ಪಕ್ಷಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲು ನಾಯಕರೇ ಇಲ್ಲ” ಎಂದು ಪ್ರಶಾಂತ್ ಕಿಶೋರ್ ವ್ಯಂಗ್ಯವಾಡಿದ್ದಾರೆ.

    “2020ರ ಬಿಹಾರ ಚುನಾವಣೆಯಲ್ಲಿ ಬಿಜೆಪಿ 110 ಸೀಟುಗಳಲ್ಲಿ ಸ್ಪರ್ಧಿಸಿತ್ತು, ಪಡೆದಿದ್ದು 74 ಸೀಟು. ಆರ್‌ಜೆಡಿ ಪಕ್ಷವೇ 75 ಸೀಟು ಗೆದ್ದು ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. 115 ಸೀಟುಗಳಲ್ಲಿ ಸ್ಪರ್ಧಿಸಿದ್ದ ಜೆಡಿಯುಗಳಿಸಿದ್ದು 43 ಸೀಟು. ಬಿಜೆಪಿ ಸ್ವತಂತ್ರವಾಗಿ ಕಣಕ್ಕಿಳಿದರೂ ಸಹ ಪಕ್ಷ 60-70 ಸೀಟುಗಳನ್ನು ಮಾತ್ರ ಗೆಲ್ಲಲಿದೆ” ಎಂದು ಹೇಳಿದರು.

    “ವಿಶ್ವದ ಅತಿ ದೊಡ್ಡ ಪಕ್ಷ ಬಿಜೆಪಿಯನ್ನು ನರೇಂದ್ರ ಮೋದಿ, ಅಮಿತ್ ಶಾ ಮುಂತಾದ ನಾಯಕರು ಮುನ್ನಡೆಸುತ್ತಿದ್ದಾರೆ. ಆದರೆ ಪಕ್ಷ ಬಿಹಾರದಲ್ಲಿ 243 ಸೀಟುಗಳಲ್ಲಿ ಕಣಕ್ಕಿಳಿಯಲು ಶಕ್ತಿ ಹೊಂದಿಲ್ಲ. ಚುನಾವಣೆ ಗೆಲ್ಲುವುದು, ಸರ್ಕಾರ ರಚನೆ ಮಾಡುವುದು ದೂರದ ಮಾತು” ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ.

    “ನೀವು 100 ಸೀಟುಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದರೂ ಬಿಹಾರದಲ್ಲಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಬಿಹಾರ ಗೆಲ್ಲಲು 120 ಸೀಟುಗಳು ಬೇಕು” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಕಿಶೋರ್ ಮಾತಿಗೆ ತಿರುಗೇಟು ಕೊಟ್ಟಿರುವ ಬಿಜೆಪಿ, ದೆಹಲಿಯಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಮಾಡದೇ 27 ವರ್ಷಗಳ ಬಳಿಕ ಅಧಿಕಾರ ಪಡೆದಿಲ್ಲವೇ? ಎಂದು ಪ್ರಶ್ನೆ ಮಾಡಿದೆ.

    ಬಿಹಾರದಲ್ಲಿ ನವೆಂಬರ್ 6, 11ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಎನ್‌ಡಿಎ ಮೈತ್ರಿಕೂಟದ ಮೂಲಕ ಚುನಾವಣೆ ಎದುರಿಸುತ್ತಿದೆ. 243 ಸೀಟುಗಳ ಪೈಕಿ ಬಿಜೆಪಿ ಮತ್ತು ಜೆಡಿಯು ತಲಾ 101 ಸೀಟುಗಳಲ್ಲಿ ಕಣಕ್ಕಿಳಿದಿವೆ.

    ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ, ಮಹಾಘಟಬಂಧನ್ ಎದುರಾಳಿಗಳು. ಮಹಾಘಟಬಂಧನ್ ಮೈತ್ರಿಕೂಟ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಜನ್ ಸುರಾಜ್ ಪಕ್ಷ ಸಹ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿದಿದೆ. ಆದರೆ ಪಕ್ಷ ನಾಯಕ ಪ್ರಶಾಂತ್ ಕಿಶೋರ್ ಚುನಾವಣೆಗೆ ಸ್ಪರ್ಧಿಸಿಲ್ಲ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading