ಬೆಂಗಳೂರು: ನಾಡಿನಾದ್ಯಂತ ಕನ್ನಡ ಹಬ್ಬದ ಆಚರಣೆ ಭರ್ಜರಿಯಾಗಿ ನಡೆಯುತ್ತಿದ್ದು, ಎಲ್ಲೆಡೆ ಹಳದಿ, ಕೆಂಪು ಬಾವುಟ ಹಾರಾಡುತ್ತಿದೆ. ಬೆಳ್ಳಂಬೆಳಗ್ಗೆಯೇ ಶಾಲೆಗಳು, ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡಮ್ಮನ ಹಬ್ಬವನ್ನು ಕನ್ನಡಿಗರು ಆಚರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಗೀತೆಗಳನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.
ಇನ್ನು ಸಿನಿಮಾ ಕಲಾವಿದರು, ರಾಜಕಾರಣಿಗಳು ಹಾಗೂ ಕ್ರಿಕೆಟಿಗರೂ ಸಹ ಕನ್ನಡ ರಾಜ್ಯೋತ್ಸವದ ಕುರಿತಾಗಿ ತಮ್ಮ ಅಧಿಕೃತ ಖಾತೆಗಳಲ್ಲಿ ಬರೆದುಕೊಳ್ಳುತ್ತಿದ್ದು, ನಾಡ ಜನತೆಗೆ ಶುಭ ಕೋರುತ್ತಿದ್ದಾರೆ.
ಅದರಂತೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕರ್ನಾಟಕ ಹಾಗೂ ಬೆಂಗಳೂರನ್ನು ಪ್ರತಿನಿಧಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಹ ಕನ್ನಡ ಜನತೆಗೆ ರಾಜ್ಯೋತ್ಸವದ ಶುಭಾಶಯ ಕೋರಿದೆ. ಈ ಸಲುವಾಗಿ ತನ್ನ ಆಟಗಾರರ ಕಡೆಯಿಂದ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಹೇಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆ ವಿಡಿಯೊವನ್ನು ಹರಿಬಿಟ್ಟಿದೆ.
ಈ ವಿಡಿಯೊದಲ್ಲಿ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಶ್ರೇಯಾಂಕ ಪಾಟೀಲ್, ದೇವದತ್ ಪಡಿಕ್ಕಲ್, ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್, ಜೇಕಬ್ ಬೆಥೆಲ್, ಜಿತೇಶ್ ಶರ್ಮಾ, ಮನೋಜ್ ಭಂಡಗೆ ಕನ್ನಡ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


