Monday, September 21, 2026
spot_img
More
    spot_img
    HomeLatest newsಸರ್ಕಾರಿ ಕಚೇರಿ, ಸಭೆಗಳಲ್ಲಿ ಕಡ್ಡಾಯವಾಗಿ ನಂದಿನಿ ಉತ್ಪನ್ನ ಬಳಕೆ, ಸಿಎಂ ಖಡಕ್ ಸೂಚನೆ

    ಸರ್ಕಾರಿ ಕಚೇರಿ, ಸಭೆಗಳಲ್ಲಿ ಕಡ್ಡಾಯವಾಗಿ ನಂದಿನಿ ಉತ್ಪನ್ನ ಬಳಕೆ, ಸಿಎಂ ಖಡಕ್ ಸೂಚನೆ

    ಕರ್ನಾಟಕ ಸರ್ಕಾರ ಪರಿಸರ ಸ್ನೇಹಿಯಾಗುತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಟಿಪ್ಪಣಿಯನ್ನು ಹೊರಡಿಸಿದ್ದಾರೆ. ಈ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

    Advertisement

    ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್‌) ಉತ್ಪನ್ನ ಬಳಕೆ ಸೇರಿದಂತೆ ಪ್ಲಾಸ್ಟಿಕ್ ಬಾಟಲ್‌ಗಳ ನಿಷೇಧದ ಕುರಿತು ಮುಖ್ಯಮಂತ್ರಿಗಳು ಟಿಪ್ಪಣಿಯನ್ನು ಹೊರಡಿಸಿದ್ದಾರೆ. ಎಲ್ಲಾ ಇಲಾಖೆಗಳು ಇದನ್ನು ಪಾಲನೆ ಮಾಡಬೇಕು ಎಂದು ಸೂಚನೆಯನ್ನು ನೀಡಲಾಗಿದೆ.

    ಟಿಪ್ಪಣಿ ವಿವರ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟಿಪ್ಪಣಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಹೇಳಿದ್ದಾರೆ.

    ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ/ ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಸೂಚಿಸಿದೆ ಎಂದು ತಿಳಿಸಿದ್ದಾರೆ.

    ಮುಖ್ಯಮಂತ್ರಿಗಳ ಈ ಟಿಪ್ಪಣಿ ಅನುಸಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಅಧಿಕೃತ ಆದೇಶವೊಂದನ್ನು ಹೊರಡಿಸಲಿದ್ದಾರೆ. ಎಲ್ಲಾ ಸರ್ಕಾರಿ ಕಚೇರಿ, ಸಭೆಗಳಲ್ಲಿ ಕೆಎಂಎಫ್‌ನ ನಂದಿನಿ ಉತ್ಪನ್ನ ಬಳಕೆ ಮಾಡುವಂತೆ ಸೂಚನೆ ನೀಡಲಿದ್ದಾರೆ.

    ಪ್ಲಾಸ್ಟಿಕ್ ಬಾಟಲ್ ನಿಷೇಧ: ಕರ್ನಾಟಕ ಸರ್ಕಾರ ಸರ್ಕಾರದ ಸಭೆ/ ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ ಹಾಗೂ ಸರಬರಾಜು ನಿಷೇಧಿಸಿ ಈ ಹಿಂದೆಯೇ ಸುತ್ತೋಲೆಯನ್ನು ಹೊರಡಿಸಿತ್ತು.

    Single use ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ/ ಸರಬರಾಜನ್ನು ನಿಷೇಧಿಸುವ ಬಗ್ಗೆ ಎಂದು ದಿನಾಂಕ 5/9/2018ರಂದು ಆದೇಶಿಸಲಾಗಿತ್ತು. ಆದರೂ ಬಳಕೆ ನಿಲ್ಲದ ಕಾರಣ ಮತ್ತೊಮ್ಮೆ ಸುತ್ತೋಲೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶವನ್ನು ಹೊರಡಿಸಿದ್ದರು.

    ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ/ ಸಮಾರಂಭಗಳಲ್ಲಿ ಪ್ಲಾಸ್ಟಿಕ್‌ ಬಾಟಲಿ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿತ್ತು.

    ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆ ಮಾಡಿ ಎಲ್ಲೆಂದರಲ್ಲಿ ಎಸೆಯಲಾಗುತ್ತದೆ. ಇದು ಘನ ತ್ಯಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಸೇರಿ ಹಲವಾರು ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟು ಮಾಡುವುದರ ಜೊತೆಗೆ, ನಗರ ಪ್ರದೇಶಗಳಲ್ಲಿ ಅಹಿತಕರ ದೃಶ್ಯ ಸೃಷ್ಟಿಯಾಗುತ್ತಿರುತ್ತದೆ ಎಂದು ಸರ್ಕಾರದ ಆದೇಶ ಹೇಳಿತ್ತು.

    ಸರ್ಕಾರದ ಸಭೆ/ ಸಮಾರಂಭಗಳಲ್ಲಿ ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ಸರಬರಾಜಾಗುವ ನೀರು ಹಲವಾರು ಸಂದರ್ಭಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಾತ್ರ ಬಳಕೆಯಾಗಿ ಹೆಚ್ಚಿನ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ ಮತ್ತು ಇಂತಹ ನೀರಿನ ಬಾಟಲಿಗಳನ್ನು ಖರೀದಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ದುಬಾರಿ ಆಗುತ್ತಿರುತ್ತದೆ ಎಂದು ತಿಳಿಸಲಾಗಿತ್ತು.

    ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ಬಾಟಲ್, ಪ್ಯಾಕ್ ಮಾಡಿದ ನೀರು ಸರಬರಾಜು/ ಬಳಕೆ ಮಾಡುವುದನ್ನು ನಿಷೇಧಿಸಿ, ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡುವುದನ್ನು ಉತ್ತೇಜಿಸಬೇಕು ಎಂದು ಸೂಚಿಸಲಾಗಿತ್ತು.

    ಈಗ ಪುನಃ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ ಮತ್ತು ಸರ್ಕಾರಿ ಸಭೆ/ ಸಮಾರಂಭದಲ್ಲಿ ನಂದಿನಿ ಉತ್ಪನ್ನಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಟಿಪ್ಪಣಿ ಹೊರಡಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading