ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಅಬ್ಬರ ರಾಜ್ಯದ ಮೇಲೂ ಭಾರೀ ಪರಿಣಾಮ ಬೀರಿದೆ.
ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಭಾರೀ ಮಳೆ ಹಾಗೂ ಪ್ರವಾಹದಿಂದ ಇಲ್ಲಿಯವರೆಗೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


