ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿವೆ. ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಸಹ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಬದಲಾವಣೆ ಆಗಲಿದೆಯಾ ಎಂಬ ಪ್ರಶ್ನೆ ಎದ್ದಿದೆ.
ಇನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಸಿಗಬೇಕೆಂದು ಶಾಸಕರು ಹಾಗೂ ಸ್ವಾಮೀಜಿಗಳು ಸಹ ಬ್ಯಾಟ್ ಬೀಸಿದ್ದು, ಮಲ್ಲಿಕಾರ್ಜುನ್ ಖರ್ಗೆ ಈ ಬಗ್ಗೆ ಶೀಘ್ರದಲ್ಲೇ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದರು.
ಹಲವು ಚರ್ಚೆಗಳ ಬಳಿಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ಪರಸ್ಪರ ಭೇಟಿ ಮಾಡಿ ಚರ್ಚಿಸಿ ಎಂದು ಹೈಕಮಾಂಡ್ ಸಲಹೆ ನೀಡಿತ್ತು. ಅದರಂತೆ ಮೊನ್ನೆಯಷ್ಟೇ ಭೇಟಿಯಾಗಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಾಳೆ ಮತ್ತೊಮ್ಮೆ ಬೆಳಗಿನ ಉಪಹಾರಕ್ಕೆ ಭೇಟಿ ಮಾಡಲಿದ್ದಾರೆ.
ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ಅದು ನನಗೆ ಹಾಗೂ ಮುಖ್ಯಮಂತ್ರಿಗೆ ಸಂಬಂಧಪಟ್ಟ ವಿಚಾರ, ನಾವಿಬ್ಬರೂ ಬ್ರದರ್ಸ್ ಥರ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದರು. ಅಲ್ಲದೇ ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರದ್ದು ಒಂದು ಗುಂಪು, ಡಿಕೆ ಶಿವಕುಮಾರ್ ಅವರದ್ದು ಒಂದು ಗುಂಪು ಎಂದು ಪ್ರಸಾರ ಮಾಡಲಾಗುತ್ತಿದೆ. ಆದರೆ ನಮ್ಮಲ್ಲಿ ಯಾವುದೇ ಗುಂಪಿಲ್ಲ, 140 ಶಾಸಕರೂ ನನ್ನ ಜತೆ ಇದ್ದಾರೆ. ಹುಟ್ಟುವಾಗ ಒಬ್ಬರೇ ಹುಟ್ಟುತ್ತೇವೆ, ಸಾಯುವಾಗ ಒಬ್ಬರೇ ಸಾಯುತ್ತೇವೆ. ಪಕ್ಷ ಎಂದಮೇಲೆ ಎಲ್ಲರೂ ಒಟ್ಟಿಗೆ ಇರುತ್ತೇವೆ. ಅದರ ಬಗ್ಗೆ ನೀವೇನೂ ಚಿಂತೆ ಮಾಡಲು ಹೋಗಬೇಡಿ ಎಂದರು.
ಯುವಕನಿಂದ ಲೈಂಗಿಕ ಕಿರುಕುಳ: ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


