ಮೈಸೂರು: ನಿನ್ನೆ (ಮಾರ್ಚ್ 2) ಇಲ್ಲಿನ ಕೆಎಸ್ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ವಿರುದ್ಧ ಚೆನ್ನೈ ರೈನೋಸ್ 7 ವಿಕೆಟ್ಗಳ ಗೆಲುವನ್ನು ಕಂಡು ಫೈನಲ್ ಪ್ರವೇಶಿಸಿತು.
ಮೊದಲ ಇನ್ನಿಂಗ್ಸ್ನಲ್ಲಿ 6 ರನ್ಗಳ ಮುನ್ನಡೆ ಸಾಧಿಸಿದ್ದ ಕರ್ನಾಟಕ ಬುಲ್ಡೋಜರ್ಸ್ ಎರಡನೇ ಇನ್ನಿಂಗ್ಸ್ನಲ್ಲಿ 10 ಓವರ್ಗೆ 5 ವಿಕೆಟ್ ಕಳೆದುಕೊಂಡು 123 ರನ್ ಕಲೆಹಾಕಿ ಚೆನ್ನೈ ರೈನೋಸ್ ತಂಡಕ್ಕೆ ಗೆಲ್ಲಲು 130 ರನ್ಗಳ ಗುರಿಯನ್ನು ನೀಡಿತ್ತು.
ಕರ್ನಾಟಕ ಬುಲ್ಡೋಜರ್ಸ್ ನೀಡಿದ್ದ ಕಠಿಣ 130 ರನ್ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ರೈನೋಸ್ 9.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಕರ್ನಾಟಕ ಬುಲ್ಡೋಜರ್ಸ್ ನೀಡಿದ ಗುರಿಯನ್ನು ಬೆನ್ನಟ್ಟಿದ ಚೆನ್ನೈ ರೈನೋಸ್ ರನ್ ಖಾತೆ ತೆರೆಯುವ ಮುನ್ನವೇ ಎರಡು ವಿಕೆಟ್ ಕಳೆದುಕೊಂಡಿತು. ಬಳಿಕ 26 ರನ್ಗೆ ಮೂರನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಸಂದರ್ಭದಲ್ಲಿ ಜತೆಯಾದ ನಾಯಕ ವಿಕ್ರಾಂತ್ ಹಾಗೂ ಅಜಯ್ ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ಚೇತರಿಕೆ ನೀಡುವುದರ ಜತೆಗೆ 106 ರನ್ಗಳ ಜತೆಯಾಟವಾಡಿ ತಂಡವನ್ನು ಗೆಲುವಿನ ದಡವನ್ನೂ ಸಹ ಸೇರಿಸಿದರು. ಈ ಮೂಲಕ ಆರಂಭದಲ್ಲೇ ರನ್ ಕೊಡದೇ ಎರಡು ವಿಕೆಟ್ ಪಡೆದು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಕರ್ನಾಟಕ ಬುಲ್ಡೋಜರ್ಸ್ ಕೈನಿಂದ ಪಂದ್ಯವನ್ನು ಕಸಿದುಕೊಂಡರು.
ನಾಯಕ ವಿಕ್ರಾಂತ್ 22 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 50 ರನ್ ಬಾರಿಸಿದರೆ, ಅಜಯ್ 30 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 65 ರನ್ ಗಳಿಸಿದರು.
ಕರ್ನಾಟಕ ಮೊದಲ ಇನ್ನಿಂಗ್ಸ್: 10 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 111 ರನ್
ಚೆನ್ನೈ ರೈನೋಸ್ ಮೊದಲ ಇನ್ನಿಂಗ್ಸ್: 10 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 105 ರನ್
ಕರ್ನಾಟಕ ಬುಲ್ಡೋಜರ್ಸ್ ಎರಡನೇ ಇನ್ನಿಂಗ್ಸ್: 10 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 123 ರನ್ ( 6 ರನ್ )
ಚೆನ್ನೈ ರೈನೋಸ್ ಎರಡನೇ ಇನ್ನಿಂಗ್ಸ್: 9.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 132 ರನ್.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


