ನಿನ್ನೆ (ಮಾರ್ಚ್ 1) ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ 11ನೇ ಪಂದ್ಯದಲ್ಲಿ ಇಂಗ್ಲೆಡ್ ಮಣಿಸಿದ ದಕ್ಷಿಣ ಆಫ್ರಿಕಾ ಗೆಲುವು ದಾಖಲಿಸಿದ್ದು, ಸೆಮಿಫೈನಲ್ ಪ್ರವೇಶ ಪಡೆದುಕೊಂಡಿದೆ.
ಈ ಮೂಲಕ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಎ ಗುಂಪಿನಿಂದ ಭಾರತ ಹಾಗೂ ನ್ಯೂಜಿಲೆಂಡ್ ಸೆಮಿಫೈನಲ್ ಅರ್ಹತೆ ಗಿಟ್ಟಿಸಿಕೊಂಡಿದ್ದು, ಬಿ ಗುಂಪಿನಿಂದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೆಮಿಫೈನಲ್ ತಲುಪಿವೆ.
ಆದರೆ ಇನ್ನೂ ಸಹ ಸೆಮಿಫೈನಲ್ನಲ್ಲಿ ಯಾವ ತಂಡಗಳು ಯಾವ ತಂಡಗಳ ವಿರುದ್ಧ ಕಣಕ್ಕಿಳಿಯಲಿವೆ ಎಂಬುದು ಮಾತ್ರ ಇನ್ನೂ ಸ್ಪಷ್ಟವಾಗಿಲ್ಲ. ಇಂದು (ಮಾರ್ಚ್ 2) ನಡೆಯಲಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಲೀಗ್ ಹಂತದ ಅಂತಿಮ ಪಂದ್ಯ ಸೆಮಿಫೈನಲ್ನ ಸ್ಪಷ್ಟ ಚಿತ್ರಣವನ್ನು ನೀಡಲಿದೆ.
ಬಿ ಗುಂಪಿನ ಎಲ್ಲಾ ಪಂದ್ಯಗಳು ಮುಗಿದಿದ್ದು, ದಕ್ಷಿಣ ಆಫ್ರಿಕಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಹಾಗೂ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಇತ್ತ ಎ ಗುಂಪಿನಲ್ಲಿ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿದೆ. ಭಾರತ ಹಾಗೂ ನ್ಯೂಜಿಲೆಂಡ್ ಎರಡೂ ತಂಡಗಳು ಸಹ ತಲಾ 4 ಅಂಕ ಪಡೆದಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಗ್ರಸ್ಥಾನ ಪಡೆಯಲಿದೆ. ಹೀಗೆ ಅಗ್ರಸ್ಥಾನ ಪಡೆದ ತಂಡ ಸೆಮಿಫೈನಲ್ನಲ್ಲಿ ಬಿ ಗುಂಪಿನ ಎರಡನೇ ತಂಡ ಎಂದರೆ ಆಸ್ಟ್ರೇಲಿಯಾವನ್ನು ಎದುರಿಸಲಿದೆ.
ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಸೋಲುವ ತಂಡ ಸೆಮೀಸ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


