ಮೈಸೂರು: ಇಲ್ಲಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆ ಕಟ್ಟಿಸುತ್ತಿದ್ದು, ಒಂದೆರಡು ತಿಂಗಳಲ್ಲಿ ಮನೆ ಗೃಹ ಪ್ರವೇಶ ಆಗಲಿದೆ. ಈ ಹಿನ್ನೆಲೆಯಲ್ಲಿ ಮನೆಗೆ ಕೂಗಳತೆ ದೂರದಲ್ಲಿರುವ ತರಕಾರಿ, ಟೀ, ಫಾಸ್ಟ್ಫುಡ್ ಅಂಗಡಿಗಳ ತೆರವಿಗೆ ನಗರ ಪಾಲಿಕೆ ಮುಂದಾಗಿದೆ.
ಮೈಸೂರು ಪಾಲಿಕೆಯು ವಿಶ್ವಮಾನವ ಜೋಡಿ ರಸ್ತೆಯ ಬೀದಿ ಬದಿ ವ್ಯಾಪಾರಸ್ಥರ ಅಂಗಡಿ ತೆರವಿಗೆ ನೋಟಿಸ್ ನೀಡಿದೆ. ಪಾಲಿಕೆಯ ಈ ನಿರ್ಧಾರಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಮನೆ ಕಟ್ಟಿಸುತ್ತಿದ್ದಾರೆ. ಇನ್ನೂ ಒಂದೆರಡು ತಿಂಗಳಲ್ಲಿ ಮನೆ ಗೃಹಪ್ರವೇಶ ಮಾಡಲಾಗುತ್ತಿರುವ ಬೆನ್ನಲ್ಲೇ ನಗರ ಪಾಲಿಕೆಯಿಂದ ದಿಢೀರ್ ಫುಟ್ಪಾತ್ ತೆರವು ಹೆಸರಿನಲ್ಲಿ ಮನೆಯ ಕೂಗಳತೆ ದೂರದಲ್ಲಿರುವ 20ಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಸ್ಥರನ್ನು ಎತ್ತಂಗಡಿ ಮಾಡಿಸಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಮನೆಯಿಂದ 100 ಮೀಟರ್ ಅಂತರದಲ್ಲಿರುವ 20ಕ್ಕೂ ಹೆಚ್ಚು ಜನರು ತರಕಾರಿ, ಟೀ, ಫಾಸ್ಟ್ಪುಡ್ ಅಂಗಡಿ ಇಟ್ಟುಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ಅಲ್ಲೇ ವ್ಯಾಪಾರ ಮಾಡುತ್ತಿದ್ದರು. ಇದೀಗ ಮೈಸೂರು ಪಾಲಿಕೆ, ಬೆಂಗಳೂರು ಮೂಲದ ವಕೀಲರೊಬ್ಬರು ದೂರು ಕೊಟ್ಟಿದ್ದಾರೆ ಎಂದು ಹೇಳಿ ವ್ಯಾಪಾರಸ್ಥರಿಗೆ ಅಂಗಡಿ ಹಾಕದಂತೆ ನೋಟಿಸ್ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


