Friday, March 20, 2026
spot_img
More
    spot_img
    HomeTop StoryUnion bank;ಯೂನಿಯನ್ ಬ್ಯಾಂಕ್‌ ಆಫ್‌ ಇಂಡಿಯಾದಿಂದ 500 ಹುದ್ದೆಗೆ ಅರ್ಜಿ ಆಹ್ವಾನ

    Union bank;ಯೂನಿಯನ್ ಬ್ಯಾಂಕ್‌ ಆಫ್‌ ಇಂಡಿಯಾದಿಂದ 500 ಹುದ್ದೆಗೆ ಅರ್ಜಿ ಆಹ್ವಾನ

    ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಆಸಕ್ತರಿರುವವರು ಮತ್ತು ಇನ್ನೂ ಅವಕಾಶಕ್ಕಾಗಿ ಕಾಯುತ್ತಿದ್ದವರು ಈಗ ಯೂನಿಯನ್ ಬ್ಯಾಂಕ್‌ ನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಯೂನಿಯನ್ ಬ್ಯಾಂಕ್ ತನ್ನ ಅಧಿಕೃತ ವೆಬ್‌ಸೈಟ್ unionbankofindia.co.in ನಲ್ಲಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಮೂಲಕ ಒಟ್ಟು 500 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಹಾಗೂ ಇತರೆ ಪ್ರಮುಖ ಮಾಹಿತಿಗಳು ಈ ಕೆಳಗಿನಂತಿವೆ.ಸಹಾಯಕ ವ್ಯವಸ್ಥಾಪಕ (ಕ್ರೆಡಿಟ್) 250 ಹುದ್ದೆಗಳು, ಹಾಗೂ ಸಹಾಯಕ ವ್ಯವಸ್ಥಾಪಕ (ಐಟಿ) 250 ಹುದ್ದೆಗಳು ಇದ್ದು ನಿಮಗೆ ಅನ್ವಯ ಆಗುವ ಹುದ್ದೆಗಳಿಗೆ ನೀವೀಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆ ಆದವರು ತಿಂಗಳಿಗೆ ರೂ. 48,480 ರಿಂದ ರೂ. 85,480 ವರೆಗೆ ಸ್ಯಾಲರಿ ಪಡೆಯಬಹುದಾಗಿದೆ.

    ಪ್ರಮುಖ ದಾಖಲೆಗಳು

    10ನೇ ತರಗತಿ ಅಂಕ ಪ್ರಮಾಣಪತ್ರ

    12ನೇ ತರಗತಿ ಅಂಕ ಪ್ರಮಾಣಪತ್ರ

    ಜಾತಿ, ಆದಾಯ ಪ್ರಮಾಣಪತ್ರ

    ಆಧಾರ್ ಕಾರ್ಡ್

    ನೋಂದಾಯಿತ ಮೊಬೈಲ್ ಸಂಖ್ಯೆ

    ಇಮೇಲ್ ಐಡಿ

    ಛಾಯಾಚಿತ್ರ

    ಸಹಿ

    ಆಯ್ಕೆ ವಿಧಾನ:

    ಲಿಖಿತ ಪರೀಕ್ಷೆ

    ಸಂದರ್ಶನ

    ದಾಖಲೆ ಪರಿಶೀಲನೆ

    ವೈದ್ಯಕೀಯ ಪರೀಕ್ಷೆ

    ಅರ್ಜಿ ಶುಲ್ಕ:

    ಇತರೆ ವರ್ಗಗಳ ಅಭ್ಯರ್ಥಿಗಳಿಗೆ – ರೂ.1180

    ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ರೂ.177

    ಶೈಕ್ಷಣಿಕ ಅರ್ಹತೆ:

    ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.

    ಸಹಾಯಕ ವ್ಯವಸ್ಥಾಪಕ (ಕ್ರೆಡಿಟ್) ಹುದ್ದೆಗೆ – 60% ಅಂಕಗಳೊಂದಿಗೆ ಹಣಕಾಸು ವಿಷಯದಲ್ಲಿ ಪದವಿ + CA/CMA/CS 5 MBA/PGDM (SC/ST/OBC/PWBD 55%).

    ಸಹಾಯಕ ವ್ಯವಸ್ಥಾಪಕ (ಐಟಿ) ಹುದ್ದೆಗೆ ಸಂಬಂಧಿತ ಐಟಿ/ಸಿಎಸ್/ಡೇಟಾ/ಸೈಬರ್ ಶಾಖೆಗಳಲ್ಲಿ ಬಿಇ/ಬಿ.ಟೆಕ್/ಎಂಸಿಎ/ಎಂ.ಎಸ್ಸಿ/ಎಂ.ಟೆಕ್ ಜೊತೆಗೆ 1 ವರ್ಷದ ಅರ್ಹತಾ ಅನುಭವ.

    ವಯೋಮಾನ : ದಿನಾಂಕ 01/04/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 22 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

    ವಯೋಮಿತಿ ಸಡಿಲಿಕೆ :

    • ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
    • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
    • ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

    ಆನ್‌ಲೈನ್‌ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು

    ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಕೇವಲ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು.

    ಅರ್ಜಿ ಸಲ್ಲಿಕೆ ಹಂತಗಳು:

    ಹಂತ 1: ಅರ್ಜಿ ಸಲ್ಲಿಸುವ ಮೊದಲು ಯೂನಿಯನ್ ಬ್ಯಾಂಕ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಗಮನपूर्वಕ ಓದಿ. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.

    ಹಂತ 2: ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಕೆಳಗಿನ “ಅಪ್ಲೈ ಆನ್‌ಲೈನ್‌” ಲಿಂಕ್ ಕ್ಲಿಕ್ ಮಾಡಿ ಅರ್ಜಿ ಫಾರ್ಮ್ ತೆರೆಯಿರಿ.

    ಹಂತ 3: ಫಾರ್ಮ್‌ನಲ್ಲಿ ಕೇಳಲಾದ ಮಾಹಿತಿಯನ್ನು (ಉದಾ: ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಸರಿಯಾಗಿ ಭರ್ತಿ ಮಾಡಿ. ಸಲ್ಲಿಸುವ ಮೊದಲು ಎಲ್ಲ ಮಾಹಿತಿಯನ್ನು ಒಮ್ಮೆ ಪುನಃ ಪರಿಶೀಲಿಸಿ.

    ಹಂತ 4: ಅರ್ಜಿ ಪ್ರಕ್ರಿಯೆಯಲ್ಲಿ ದಾಖಲಾತಿಗಳನ್ನು ಅಪ್ಲೋಡ್ ಮಾಡಲು ಸೂಚಿಸಿರುವರೆಂದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

    ಹಂತ 5: ಅರ್ಜಿ ಶುಲ್ಕ ಪಾವತಿ ಅಗತ್ಯವಿದ್ದರೆ, ಆನ್‌ಲೈನ್ ಮೂಲಕ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-04-2025
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-05-2025
    ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-05-2025


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading