Sunday, November 1, 2026
spot_img
More
    spot_img
    HomeStateಪ್ರಯಾಣಿಕರ ಗಮನಕ್ಕೆ: ಮೈಸೂರು - ಬೆಂಗಳೂರು ಹೈವೇ 6 ಕಿಮೀ ಬಂದ್: ಸರ್ವಿಸ್ ರಸ್ತೆಯಲ್ಲಿ ವಾಹನ...

    ಪ್ರಯಾಣಿಕರ ಗಮನಕ್ಕೆ: ಮೈಸೂರು – ಬೆಂಗಳೂರು ಹೈವೇ 6 ಕಿಮೀ ಬಂದ್: ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ

    ಮೈಸೂರು: ಬೆಂಗಳೂರು – ಮೈಸೂರು ಹೈ ವೇನಲ್ಲಿ ಸ್ಕೈ ವಾಕ್ ಅಳವಡಿಸುತ್ತಿರುವ ಕಾರಣದಿಂದ ಇಂದು ( ಜೂನ್ 2 ) ಸಂಚಾರವನ್ನು ಬಂದ್ ಮಾಡಲಾಗಿದೆ.

    ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ಶುರುವಾಗುವ ರಸ್ತೆಯ ಪ್ರವೇಶದಲ್ಲೇ ಬ್ಯಾರಿಕೇಡ್ ಹಾಕಿ ವಾಹನಗಳನ್ನು ಪಕ್ಕದ ಸರ್ವಿಸ್ ರಸ್ತೆಯಲ್ಲಿ ಕಳುಹಿಸಲಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

    ಮಣಿಪಾಲ್ ಆಸ್ಪತ್ರೆಯಿಂದ ಶ್ರೀರಂಗಪಟ್ಟಣದ ಟೋಲ್ ಎಕ್ಸಿಟ್ ತನಕ ಸುಮಾರು 6 ಕಿಮೀವರೆಗೆ ಸವಾರರು ಸರ್ವಿಸ್ ರಸ್ತೆಯಲ್ಲಿ ಚಲಿಸಬೇಕಿದೆ. ಸ್ಕೈ ವಾಕ್ ಅಳವಡಿಕೆ ಪೂರ್ಣಗೊಂಡ ಬಳಿಕ ಎಂದಿನಂತೆ ಹೈ ವೇ ಓಡಾಟಕ್ಕೆ ಮುಕ್ತವಾಗಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search