Saturday, September 19, 2026
spot_img
More
    spot_img
    HomeLatest newsಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಭೇಟಿ ಮಾಡಿಸಿದ್ದೇ ನಾನು, ಲಾಟರಿ ಹೊಡೆದುಬಿಟ್ಟ ಎಂದ ಬಿಆರ್‌ ಪಾಟೀಲ್‌; ವಿಡಿಯೊ...

    ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಭೇಟಿ ಮಾಡಿಸಿದ್ದೇ ನಾನು, ಲಾಟರಿ ಹೊಡೆದುಬಿಟ್ಟ ಎಂದ ಬಿಆರ್‌ ಪಾಟೀಲ್‌; ವಿಡಿಯೊ ಲೀಕ್

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಸಮಾಧಾನ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಎಲ್ಲ ಪಕ್ಷಗಳದ್ದೂ ಇದೇ ಕಥೆಯಾಗಿದ್ದು, ಅಧಿಕಾರದಲ್ಲಿರುವ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಹೊರಬಿದ್ದಿದೆ.

    Advertisement

    ಆಳಂದ ಶಾಸಕ ಬಿಆರ್‌ ಪಾಟೀಲ್‌ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸ್ಪೋಟಕ ಹೇಳಿಕೆ ನೀಡುವ ಮೂಲಕ ತಮ್ಮದೇ ಪಕ್ಷದ ವಿರುದ್ಧ ಮಾತನಾಡಿದ್ದರು. ಕಾಂಗ್ರೆಸ್‌ಗೆ ಈ ಹೇಳಿಕೆ ಭಾರೀ ಮುಜುಗರವನ್ನುಂಟುಮಾಡಿತ್ತು.

    ಇದೇ ಶಾಸಕ ಇದೀಗ ಮತ್ತೊಂದು ವಿವಾದವನ್ನೆಬ್ಬಿಸಿದ್ದು, ಇವರದ್ದು ಎನ್ನಲಾದ ವಿಡಿಯೊವೊಂದು ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ಬಿಆರ್‌ ಪಾಟೀಲ್‌ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದಾರೆ. ಯಾರದ್ದೋ ಜೊತೆ ಮೊಬೈಲ್‌ ಕರೆಯಲ್ಲಿ ಮಾತನಾಡುತ್ತಿರುವ ಬಿಆರ್‌ ಪಾಟೀಲ್‌ ʼಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ ಮುಖ್ಯಮಂತ್ರಿಯಾದ. ಸಿದ್ದರಾಮಯ್ಯಗೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿಸಿದ್ದು ನಾನು. ಅವನ ಗ್ರಹಚಾರ ಚೆನ್ನಾಗಿತ್ತು ಅವನು ಆಗಿಬಿಟ್ಟ. ನಮಗೆ ಗಾಡು ಇಲ್ಲ, ಗಾಡ್‌ಫಾದರ್‌ ಇಲ್ಲʼ ಎಂದಿದ್ದಾರೆ.

    ಅಲ್ಲದೇ ಇದೇ ವಿಡಿಯೊದಲ್ಲಿ ಸುರ್ಜೇವಾಲ ಅವರ ಜೊತೆ ಮಾತನಾಡಿದ್ದೇನೆ ಎಂದು ಹೇಳಲಾಗಿದ್ದು, ಇದು ನಿನ್ನೆಯ ( ಜುಲೈ 1 ) ಎನ್ನಲಾಗುತ್ತಿದೆ.

    2025ರ ಮೊದಲ 6 ತಿಂಗಳಲ್ಲಿ ಕನ್ನಡ ಚಿತ್ರಗಳು ಮಾಡಿದ ಕಲೆಕ್ಷನ್‌; ಇಷ್ಟೇ ಸಾಕಾ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading