ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದರು.
ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಳಿ ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಿನಿಂದಲೇ ಮುಂಬರುವ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ ನಿರ್ವಹಣೆ ಹೇಗೆ ಮಾಡಬೇಕು ಎಂದು ಚರ್ಚೆ ನಡೆಸಲು ಜವಾಬ್ದಾರಿ ವಹಿಸಲು ಸುರ್ಜೇವಾಲಾ ಅವರು ಬಂದಿದ್ದಾರೆ ಎಂದು ಹೇಳಿದರು.
ಇನ್ನು ಪಕ್ಷದಲ್ಲಿ ಶಿಸ್ತು ಮುಖ್ಯ. ಇಕ್ಬಾಲ್ ಹುಸೇನ್ ಅವರಿಗೂ ನೋಟಿಸ್ ನೀಡುವೆ. ಬೇರೆಯವರಿಗೂ ನೋಟಿಸ್ ನೀಡಬೇಕಾಗುತ್ತದೆ. ನನ್ನ ಹೆಸರು ಹೇಳಿ, ನನ್ನನ್ನು ಸಿಎಂ ಮಾಡಿ ಎಂದು ಹೇಳುವ ಅವಶ್ಯಕತೆಯಿಲ್ಲ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಇರುವಾಗ ಬೇರೆ ಹೆಸರು ಹೇಳುವುದು ಯಾಕೆ? ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನೊಬ್ಬನೇ ಪಕ್ಷ ಕಟ್ಟಿದ್ದೇನೆಯೇ? ನನ್ನಂತೆ ನೂರಾರು, ಸಾವಿರಾರು ಲಕ್ಷಾಂತರ ಜನರು ಪಕ್ಷ ಕಟ್ಟಿದ್ದಾರೆ. ಮೊದಲು ಅವರ ನಂಬಿಕೆಗಳನ್ನು ಉಳಿಸಿಕೊಳ್ಳೋಣ ಎಂದು ಹೇಳಿದರು.
ಮತ್ತೊಂದು ಐಷಾರಾಮಿ ಕಾರು ಖರೀದಿಸಿದ ರಾಕಿಂಗ್ ಸ್ಟಾರ್ ಯಶ್; ಬೆಲೆ ಎಷ್ಟು ಕೋಟಿ ಗೊತ್ತಾ?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


