Saturday, September 5, 2026
spot_img
More
    spot_img
    HomeLatest newsಕೊವಿಡ್‌ ವ್ಯಾಕ್ಸಿನ್‌ ತೆಗೆದುಕೊಂಡವರಿಗೆ ಹೃದಯಾಘಾತ? ಅಧ್ಯಯನದ ವರದಿ ಬಹಿರಂಗ

    ಕೊವಿಡ್‌ ವ್ಯಾಕ್ಸಿನ್‌ ತೆಗೆದುಕೊಂಡವರಿಗೆ ಹೃದಯಾಘಾತ? ಅಧ್ಯಯನದ ವರದಿ ಬಹಿರಂಗ

    ನವದೆಹಲಿ: ಕೋವಿಡ್‌ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್‌ ಹಾಗೂ ಏಮ್ಸ್‌ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ.

    Advertisement

    ಕಳೆದ 2020ರಿಂದ ಹೃದಯಾಘಾತದಿಂದ ಯುವಜನರ ಹಠಾತ್‌ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಹೆಚ್ಚಿನವರು ಇದು ಕೋವಿಡ್‌ ಎಫೆಕ್ಸ್‌ ಎಂದು ಹೇಳುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ಕೋವಿಡ್-‌19 ಲಸಿಕೆಗಳು ಹಾಗೂ ಹೃದಯಾಘಾತದಿಂದ ಉಂಟಾಗುವ ಹಠಾತ್‌ ಸಾವುಗಳ ಹೆಚ್ಚಳದ ನಡುವೆ ಯಾವುದೇ ಸಂಬಂಧ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

    ವಯಸ್ಕರಲ್ಲಿ ಹಠಾತ್‌ ಸಾವಿನ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಅಖಿಲ್‌ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ನಡೆಸಿದ ವ್ಯಾಪಕ ಅಧ್ಯಯನಗಳ ಕುರಿತು ಸಚಿವಾಲಯವು ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.

    ಅನುವಂಶಿಕತೆ, ಜೀವನಶೈಲಿ ಸೇರಿದಂತೆ ವಿವಿಧ ಅಂಶಗಳಿಂದಾಗಿ ಹಠಾತ್‌ ಹೃದಯ ಸಾವುಗಳು ಸಂಭವಿಸಬಹುದು ಎಂದು ಸ್ಪಷ್ಟಪಡಿಸಿದೆ.

    ಕೋವಿಡ್‌ ಲಸಿಕೆ ಹಠಾತ್‌ ಸಾವುಗಳಿಗೆ ಸಂಬಂಧಿಸಿದೆ ಎಂದು ನೀಡುವ ಹೇಳಿಕೆಗಳು ಸುಳ್ಳು ಮತ್ತು ದಾರಿತಪ್ಪಿಸುವವು. ವೈಜ್ಞಾನಿಕ ಒಮ್ಮತದಿಂದ ಬೆಂಬಲಿತವಾಗಿಲ್ಲ ಎಂದು ವೈಜ್ಞಾನಿಕ ತಜ್ಞರು ಪುನರುಚ್ಛರಿಸಿದ್ದಾರೆ ಎಂದು ಹೇಳಿಕೆ ನೀಡಲಾಗಿದೆ.

    ಈ ಮೂಲಕ ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿದೆ ಎಂದು ಅನುಮಾನ ಪಡುತ್ತಿದ್ದ ಜನತೆಗೆ ಈಗ ರಿಲೀಫ್‌ ಸಿಕ್ಕಿದಂತಾಗಿದ್ದು, ಜೀವನಶೈಲಿ ಬದಲಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ

    ಓಲಾ, ಊಬರ್‌, ರಾಪಿಡೊಗೆ ಡಬಲ್‌ ಚಾರ್ಜ್‌ ಮಾಡಲು ಅನುಮತಿ ನೀಡಿದ ಕೇಂದ್ರ ಸರ್ಕಾರ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading