ಆಷಾಢ ಮಾಸದ ಹಿನ್ನೆಲೆಯಲ್ಲಿ, ಕನ್ನಡದ ಜನಪ್ರಿಯ ನಟ ಶಿವರಾಜ್‌ಕುಮಾರ್ ತಮ್ಮ ಪತ್ನಿ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಂಗಳವಾರ ರಾತ್ರಿ ಬೆಟ್ಟಕ್ಕೆ ಆಗಮಿಸಿದ ದಂಪತಿ ಭಕ್ತಿಯಿಂದ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಅಭಿಮಾನಿಗಳು ತಮ್ಮ ಪ್ರಿಯ ನಟರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್ ಅವರಿಂದ ವಿಶೇಷ ಪೂಜೆ ಮಾಡಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಶಿವರಾಜ್‌ಕುಮಾರ್ ಮೈಸೂರು ಭಾಗದ ಸುತ್ತಮುತ್ತ ಪ್ರವಾಸ ಕೈಗೊಂಡಿದ್ದು, ಮೊನ್ನೆಯಷ್ಟೇ ಪತ್ನಿ ಜೊತೆಗೂಡಿ ಕಬಿನಿ ಡ್ಯಾಂಗೆ ಭೇಟಿ ನೀಡಿದ್ದರು. ಅಲ್ಲಿ ಹಾಡಿ ಮಕ್ಕಳೊಂದಿಗೆ ಫೋಟೋಗಳನ್ನೂ ತೆಗೆಸಿಕೊಂಡಿದ್ದರು.ಶಿವರಾಜ್‌ಕುಮಾರ್ 1986ರಲ್ಲಿ ‘ಆನಂದ್’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿ, ಸಿನಿ ಜರ್ನಿಯಲ್ಲಿ 40 ವರ್ಷಗಳ ಸಾಧನೆ ಪೂರೈಸಿದ್ದಾರೆ. ಕನ್ನಡದ ಜನಮನದಲ್ಲಿ ‘ಹ್ಯಾಟ್ರಿಕ್ ಹೀರೋ’ ಮತ್ತು ‘ಸೆಂಚುರಿ ಸ್ಟಾರ್’ ಎಂಬ ಹೆಸರಿನಿಂದ ಅವರು ಅಳವಡಿಸಿಕೊಂಡಿದ್ದಾರೆ.
ಯಶ್, ರಣಬೀರ್ ನಟನೆಯ ʼರಾಮಾಯಣʼ ಗ್ಲಿಂಪ್ಸ್ ಬಿಡುಗಡೆಗೆ ಕ್ಷಣಗಣನೆ ಆರಂಭ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


