Sunday, September 6, 2026
spot_img
More
    spot_img
    HomeLatest news5 ವರ್ಷ ನಾನೇ ಮುಖ್ಯಮಂತ್ರಿ ಎಂದು ಘೋಷಿಸಿದ ಸಿದ್ದರಾಮಯ್ಯ!

    5 ವರ್ಷ ನಾನೇ ಮುಖ್ಯಮಂತ್ರಿ ಎಂದು ಘೋಷಿಸಿದ ಸಿದ್ದರಾಮಯ್ಯ!

    ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಪಾಳಯದಲ್ಲಿ ಅಸಮಾಧಾನ ಉಂಟಾಗಿದ್ದು, ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

    Advertisement

    ಅದರಲ್ಲೂ ಕಾಂಗ್ರೆಸ್‌ ಪಕ್ಷದ ಶಾಸಕ ಇಕ್ಬಾಲ್‌ ಹುಸೇನ್‌ ನೀಡಿದ ಹೇಳಿಕೆ ಭಾರೀ ಗೊಂದಲವನ್ನು ಎಬ್ಬಸಿತ್ತು. ತಾನು ಮಾತ್ರವಲ್ಲ 100 ಶಾಸಕರು ಮುಖ್ಯಮಂತ್ರಿ ಬದಲಾವಣೆ ಬಯಸಿದ್ದಾರೆ ಎಂದು ಹೇಳಿಕೆ ನೀಡಿದ್ದ ಇಕ್ಬಾಲ್‌ ಇನ್ನು ಮೂರು ತಿಂಗಳಲ್ಲಿ ಡಿಕೆ ಶಿವಕುಮಾರ್‌ ಸಿಎಂ ಆಗಲಿದ್ದಾರೆ ಎಂದಿದ್ದರು.

    ಹೀಗೆ ಪಕ್ಷದವರಿಂದಲೇ ಬದಲಾವಣೆ ಮಾತುಗಳನ್ನು ಆಲಿಸಿದ್ದ ಸಿದ್ದರಾಮಯ್ಯ ಇಂದು ( ಜುಲೈ 2 ) ಮಾಧ್ಯಮಗಳ ಮುಂದೆ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಎನ್ನುತ್ತಿದ್ದ ಎಲ್ಲರಿಗೂ ಟಾಂಗ್‌ ಕೊಟ್ಟಿದ್ದಾರೆ.

    ಪತ್ರಕರ್ತರೊಬ್ಬರು 5 ವರ್ಷ ನೀವೇ ಮುಖ್ಯಮಂತ್ರಿಯಾಗಿರುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ʼಹೌದು, 5 ವರ್ಷ ನಾನೇ ಸಿಎಂ. ನಿಮಗ್ಯಾಕೆ ಅನುಮಾನ ಬಂತು?ʼ ಎಂದು ಪ್ರಶ್ನಿಸಿದರು. ಅಲ್ಲದೇ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಅಶೋಕ್‌, ವಿಜಯೇಂದ್ರ ಇವರೆಲ್ಲ ಬಿಜೆಪಿಯವರು ನಮ್ಮ ಹೈಕಮಾಂಡ್‌ ಅಲ್ಲ ಎಂದು ಕಿಡಿಕಾರಿದರು.

    ಕೊವಿಡ್‌ ವ್ಯಾಕ್ಸಿನ್‌ ತೆಗೆದುಕೊಂಡವರಿಗೆ ಹೃದಯಾಘಾತ? ಅಧ್ಯಯನದ ವರದಿ ಬಹಿರಂಗ

    ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading