ಬೆಂಗಳೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಬೊಜ್ಜು, ಮಾಂಸ ಸೇವನೆ, ಮತ್ತು ಮದ್ಯಪಾನ ಪ್ರಮುಖ ಕಾರಣವಾಗಿದೆ ಎಂದು ಜಯದೇವ ತಜ್ಞರು ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ನೀಡಿದ್ದಾರೆ.
ತಜ್ಞರು ಹೃದಯಾಘಾತಕ್ಕೆ ಮುಖ್ಯ ಕಾರಣಗಳನ್ನ ಪಟ್ಟಿ ಮಾಡಿದ್ದು, ಇದರಲ್ಲಿ ಮುಖ್ಯವಾಗಿ ಅತಿಯಾದ ತೂಕ, ರೆಡ್ ಮೀಟ್, ಮದ್ಯಪಾನ, ಧೂಮಪಾನ ಮತ್ತು ಪಾಸ್ಟ್ ಫುಡ್ ಸೇವನೆ ಹೆಚ್ಚುತ್ತಿರುವುದೇ ಹೃದಯಾಘಾತಕ್ಕೆ ಕಾರಣ ಎಂದು ಹೇಳಿದ್ದಾರೆ. ಈ ಬಗ್ಗೆ ಅಳವಾದ ಅಧ್ಯಯನ ನಡೆಸಲಿ ತಾಂತ್ರಿಕ ಸಮಿತಿ ನಿರ್ಧರಿಸಿದೆ.
ಈ ಸರಣಿ ಸಾವುಗಳಿಂದ ಸರ್ಕಾರ ಕೂಡ ಆತಂಕಗೊಂಡಿತ್ತು. ಹೀಗಾಗಿ, ಸಾವಿಗೆ ಕಾರಣ ಏನು ಎನ್ನುವುದನ್ನು ತಿಳಿಯಲು ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. 10 ದಿನದಲ್ಲೇ ವರದಿ ನೀಡುವಂತೆ 12 ಜನ ತಜ್ಞರ ಸಮಿತಿಗೆ ಸರ್ಕಾರ ಸೂಚಿಸಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಾಥಮಿಕ ವರದಿಯನ್ನು ತಜ್ಞರು ಸಿದ್ಧಪಡಿಸಿದ್ದಾರೆ.
ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧಪಡಿಸಿರುವ ಜಯದೇವ ತಜ್ಞರು ತಾಂತ್ರಿಕ ಸಮಿತಿಯ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಅತಿಯಾದ ತೂಕ, ಧೂಮಪಾನ ಮತ್ತು ಪಾಸ್ಟ್ ಫುಡ್ ಆಹಾರ ಸೇವನೆಯಿಂದ ಸಡನ್ ಡೆತ್ ಸಂಭವಿಸುತ್ತಿದೆ. ಜೀವನಶೈಲಿ, ಆಹಾರ ಪದ್ಧತಿ ಹಾಗೂ ಅನುವಂಶೀಯತೆ ಹೃದಯಘಾತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವರದಿ ಹೇಳಿದೆ.
ತಾಂತ್ರಿಕ ಸಮಿತಿ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದು, ಕೆಲವು ಅಂಶಗಳನ್ನು ವರದಿಯಲ್ಲೇ ಪತ್ತೆ ಹಚ್ಚಿದೆ.ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ದಿನೇ ದಿನೇ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. 40 ದಿನದ ಅಂತರದಲಲಿ ಬರೋಬ್ಬರಿ 21 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹಾಸನದಲ್ಲಿ ಸರಣಿ ಸಾವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ, ಜಯದೇವ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಸಮಿತಿಗೆ ಸೂಚಿಸಿದೆ.
2023ರ ಸಂಸತ್ ಭದ್ರತಾ ಲೋಪ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


